ಗಂಗಾವತಿ/ನವದೆಹಲಿ:ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಗಂಗಾವತಿ ಶಾಸಕ, ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಕೀಯದ ಹಲವು ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಾರ್ಚ್ 25ರಂದು ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಕೆಆರ್ಪಿಪಿಯನ್ನೂ ವಿಲೀನ ಮಾಡಿದ್ದರು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಆಹ್ವಾನದ ಮೇರೆಗೆ ರೆಡ್ಡಿ ದೆಹಲಿಗೆ ತೆರಳಿದ್ದರು. ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರೀಯ ಅಧ್ಯಕ ನಡ್ಡಾ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.
ಬಿ.ಎಲ್.ಸಂತೋಷ್ ಭೇಟಿಯಾದ ಜನಾರ್ದನ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಾರ್ದನ ರೆಡ್ಡಿ, ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಎಲ್ಲ ನಾಯಕರು ಸಾಮೂಹಿಕ ಶ್ರಮ ವಹಿಸಿ ಅತಿಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ಈ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂಬ ಗುರಿ ನೀಡಿದ್ದಾರೆ. ರಾಜ್ಯದ ಯಾವ ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚು ಬಲಿಷ್ಠವಾಗಿದೆ. ಎಲ್ಲಿ ಬಲಹೀನವಾಗಿದೆ ಎಂಬ ತಾಂತ್ರಿಕ ವರದಿ ಕಾರ್ಡ್ ಸಮೇತ ಮಾಹಿತಿ ನೀಡಿರುವ ನಡ್ಡಾ, ಬಲಹೀನವಾಗಿರುವ ಕ್ಷೇತ್ರದಲ್ಲಿ ಯಾವ ಕಾರ್ಯತಂತ್ರ ಮಾಡಬೇಕು ಎಂಬ ಮಾಹಿತಿ ನೀಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಜೆ.ಪಿ.ನಡ್ಡಾ ಭೇಟಿಯಾದ ಜನಾರ್ದನ ರೆಡ್ಡಿ ಅಲ್ಲದೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಪಕ್ಷದ ಆಯಾ ಭಾಗದ ಪ್ರಮುಖರ ನೇತೃತ್ವದಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ನಡ್ಡಾ ಸೂಚನೆ ನೀಡಿದ್ದಾರೆ ಎಂದು ಶಾಸಕ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ:ಈಶ್ವರಪ್ಪಗೆ ಪ್ರಧಾನಿ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ : ಆರ್.ಅಶೋಕ್