ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ-ಪ್ರಸಾದ್ ಅಬ್ಬಯ್ಯ: ಸಿಎಂ ಕೆಳಗಿಳಿಸಲು ಕಾಂಗ್ರೆಸ್​ನಲ್ಲೇ ತಂತ್ರ- ಟೆಂಗಿನಕಾಯಿ - CM Change Issue

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ನಿರ್ದೋಷಿಯಾಗಲಿದ್ದು, ಅವರೇ ಸಿಎಂ ಆಗಿ ಮುಂದುವರೆಯುವುದು ಖಚಿತ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ. ಇನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿ, ಸಿಎಂ ಕುರ್ಚಿ ಮೇಲೆ ಈಗಾಗಲೇ ಹಲವು ನಾಯಕರು ಟವಲ್ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ
ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (ETV Bharat)

By ETV Bharat Karnataka Team

Published : Sep 9, 2024, 1:29 PM IST

Updated : Sep 9, 2024, 4:22 PM IST

ಶಾಸಕರಾದ ಪ್ರಸಾದ್ ಅಬ್ಬಯ್ಯ, ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆಗಳು (ETV Bharat)

ಹುಬ್ಬಳ್ಳಿ:ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಗೆಲುವು ಶತಸಿದ್ಧ. 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕಾರಣ ಮಾಡಿದವರು ಸಿದ್ದರಾಮಯ್ಯನವರು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಗೌರವ ಘನತೆಗೆ ಕಳಂಕ ತರುವ ಕಾರ್ಯವನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕೆಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಆದರೆ ನ್ಯಾಯಾಲಯದಲ್ಲಿ ನಮಗೆ ನಂಬಿಗೆ ಇದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ನೋಡಿ ತಳಮಳ ಸೃಷ್ಟಿಯಾಗಿದೆ. ಹೇಗಾದರೂ ಮಾಡಿ ಅಡ್ಡಗಾಲು ಹಾಕಬೇಕೆಂದು ಕುತಂತ್ರ ಮಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಸಿಎಂಗೆ ಎಲ್ಲ ಶಾಸಕರ ಬೆಂಬಲದ ಜೊತೆಗೆ ಹೈಕಮಾಂಡ್ ಕೂಡ ಬೆಂಬಲವೂ ಇದೆ. ಈ ಐದು ವರ್ಷದ ಅವಧಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಪ್ರಸಾದ್ ಅಬ್ಬಯ್ಯ ತಿಳಿಸಿದರು.

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್ ನಾಯಕರ ನಿರ್ಧಾರ- ಶಾಸಕ ಟೆಂಗಿನಕಾಯಿ:ಕಳೆದ ಒಂದೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ನಾಯಕ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ದೂರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್​ನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದ ವಾದ, ಪ್ರತಿವಾದಗಳು ನಡೆಯುತ್ತಿವೆ. ಆದರೆ ಇನ್ನೂ ವಿಚಾರಣೆ ನಡೆಯುತ್ತಿರುವಾಗಲೇ ಸಿಎಂ ಕುರ್ಚಿಗೆ ಬಹುತೇಕ ಕಾಂಗ್ರೆಸ್ ನಾಯಕರು ಟವಲ್ ಹಾಕಿರುವುದನ್ನು ನೋಡಿದರೆ ಅಚ್ಚರಿಯಾಗುತ್ತದೆ ಎಂದರು.

ಈಗಾಗಲೇ ಸಿಎಂ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸುವ ಎಲ್ಲ ಕಾರ್ಯತಂತ್ರಗಳು ನಡೆಯುತ್ತಿವೆ. ಎಂ.ಬಿ.ಪಾಟೀಲ್, ಸತೀಶ ಜಾರಕಿಹೊಳಿ, ಆರ್.ವಿ.ದೇಶಪಾಂಡೆ ಹೀಗೆ ಬಹುತೇಕ ನಾಯಕರು ಸಿಎಂ ಆಗಲು ತಯಾರಿ ನಡೆಸಿರುವುದನ್ನು ನೋಡಿದರೆ ಸಿದ್ದರಾಮಯ್ಯನವರನ್ನು ಹೊರಹಾಕಲು ತಯಾರಿ ನಡೆದಿದೆ ಎಂದು ಲೇವಡಿ ಮಾಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತೆಗೆದುಕೊಂಡ‌ ನಿರ್ಧಾರದಂತೆ ಕೋರ್ಟ್ ನಿರ್ಣಯ ಬರಬಹುದು ಎಂಬುದು ಮೇಲ್ನೋಟಕ್ಕೆ ಅರ್ಥವಾಗುತ್ತದೆ ಎಂದು ತಿಳಿಸಿದರು.

Last Updated : Sep 9, 2024, 4:22 PM IST

ABOUT THE AUTHOR

...view details