ತುಮಕೂರು :ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಎಂದರೆ, ಇದರ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡಬೇಕಾಗುತ್ತದೆ, ಹೀಗಾಗಿ ನೀವೆಲ್ಲ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಎಸ್.ಆರ್ ಶ್ರೀನಿವಾಸ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಮಾತನಾಡಿದ ಅವರು, ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯ ಅವರನ್ನು ಉಳಿಸುವ ಕೆಲಸವನ್ನ ನಾವೆಲ್ಲ ಸೇರಿ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯ ಅಹಿಂದ ವರ್ಗದ ಮಾಸ್ ಲೀಡರ್. ಹಾಗಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಬೇಕು ಎಂದರು.