ಬೆಂಗಳೂರು : ಹಾಡು ಹಾಕಿದ್ದಕ್ಕೆ ನಗರತ್ ಪೇಟೆಯಲ್ಲಿ ಅಂಗಡಿ ಮಾಲೀಕ ಮುಕೇಶ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಪೊಲೀಸರು ಎಳೆದಾಡಿದ ಘಟನೆ ನಡೆದಿದೆ. ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.
ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಶಾಸಕ ಸುರೇಶ್ ಕುಮಾರ್ ಗರಂ - Hanuman devotees protest
ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರರನ್ನು ಯಾವ ಕಾರಣಕ್ಕಾಗಿ ಬಂಧಿಸಿದ್ದೀರಿ? ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.
Published : Mar 19, 2024, 4:32 PM IST
|Updated : Mar 19, 2024, 5:26 PM IST
ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಸುರೇಶ್ ಕುಮಾರ್ ಅವರನ್ನ ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಎಳೆದಾಡಿದ ಘಟನೆ ಕೂಡಾ ನಡೆದಿದೆ. ಪೊಲೀಸರ ವರ್ತನೆಯಿಂದ ಸಿಟ್ಟಿಗೆದ್ದ ಸುರೇಶ್ ಕುಮಾರ್ ಪೊಲೀಸರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರನ್ನು ಯಾವ ಕಾರಣಕ್ಕಾಗಿ ಬಂಧಿಸಿದ್ದೀರಿ? ಎಂದು ಪೊಲೀಸರ ಬಳಿ ಸುರೇಶ್ ಕುಮಾರ್ ಪ್ರಶ್ನಿಸಿದರು.
ಇದನ್ನೂ ಓದಿ :ಚಿಕ್ಕೋಡಿ: ಪಿಡಿಒ ಮೇಲೆ ಗ್ರಾ.ಪಂ. ಸದಸ್ಯನಿಂದ ಹಲ್ಲೆ ಆರೋಪ; ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ