ಕರ್ನಾಟಕ

karnataka

ಮೂಡಾ ಹಗರಣ ಸಿಬಿಐಗೆ ವಹಿಸಲು ಕೋರಿ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದ ಶಾಸಕ ಯತ್ನಾಳ್ - MUDA Scam

By ETV Bharat Karnataka Team

Published : Jul 11, 2024, 10:38 PM IST

ಮುಡಾ ಹಗರಣದ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ ಮಾಡಿದ್ದಾರೆ.

MUDA SCAM
ಸಂಗ್ರಹ ಚಿತ್ರ (ETV Bharat)

ಬೆಂಗಳೂರು:ಮೈಸೂರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿರುವ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಗರಣವನ್ನು ತಕ್ಷಣ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ.

ಎರಡು ಪುಟಗಳ ಪತ್ರ ಬರೆದಿರುವ ಅವರು, ಹಗರಣದಲ್ಲಿ ಮುಖ್ಯಮಂತ್ರಿ ಪತ್ನಿ ಪಾರ್ವತಿ ಅವರಿಗೆ ಒಟ್ಟು 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದು ಮಾಧ್ಯಮಗಳ ಮುಖಾಂತರ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದ ಸಂಪುಟ ದರ್ಜೆ ಸಚಿವರೊಬ್ಬರು ಮೂಡಾದಲ್ಲಿದ್ದ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಇದು ಭಾರಿ ಭ್ರಷ್ಟಾಚಾರ ಮುಚ್ಚಿಹಾಕುವ ಪ್ರಯತ್ನ ಎಂದು ಪತ್ರದಲ್ಲಿ ದೂರಲಾಗಿದೆ.

ಮುಡಾ ವ್ಯಾಪ್ತಿಯಲ್ಲಿ 3 ಸಾವಿರ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ 2023ರ ನವೆಂಬರ್ 27ರಂದೇ ರಾಜ್ಯ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1 ಸಾವಿರ ಕೋಟಿ ರೂ. ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಯನ್ನು ರಕ್ಷಿಸಲು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಪ್ರಯತ್ನ ಮಾಡುತಿದ್ದಾರೆ. ಆದ್ದರಿಂದ ಹಗರಣದ ಗಂಭೀರತೆಯನ್ನು ಪರಿಗಣಿಸಿ ತಾವು ಇದನ್ನು ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ದಾಖಲಿಸಿಕೊಂಡು; ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಈ ತನಿಖೆಯು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುವಂತಾಗಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ:ಎನ್​ಇಪಿ ಜಾರಿಗೆ ಸೂಚಿಸಲು ಕೋರಿ ಅರ್ಜಿ: ಪ್ರತಿಕ್ರಿಯಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ - High Court

ABOUT THE AUTHOR

...view details