ಬೆಂಗಳೂರು: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ಡಾ. ಸೂರಜ್ ರೇವಣ್ಣ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಸ್ಥಳಿಯ ಪೊಲೀಸರು ನಡೆಸಿರುವ ಪ್ರಕರಣದ ಇದುವರೆಗಿನ ತನಿಖಾ ವರದಿ ಸಿಐಡಿ ಅಧಿಕಾರಿಗಳ ಕೈ ಸೇರಿಲ್ಲ, ಹಾಗೂ ಅಧಿಕೃತವಾಗಿ ಸಿಐಡಿ ವಿಚಾರಣೆಯನ್ನ ಕೈಗೆತ್ತಿಕೊಂಡಿಲ್ಲ. ಆದ್ದರಿಂದ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.
ಇಂದು ಹಾಸನದಲ್ಲಿ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ನೇರವಾಗಿ ಸೂರಜ್ ರೇವಣ್ಣರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಸದ್ಯ ಸೂರಜ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಧಿಕೃತವಾಗಿ ತನಿಖೆ ಕೈಗೆತ್ತಿಕೊಂಡ ಬಳಿಕ ಸೂರಜ್ ಅವರನ್ನ ಸಿಐಡಿ ಕಸ್ಟಡಿಗೆ ಪಡೆದುಕೊಳ್ಳಲಿದೆ.