ಸುಳ್ಳದ ರೋಡ್ ಕ್ರಾಸ್ ಚೆಕ್ಪೋಸ್ಟ್ನಲ್ಲಿ 3,82,000 ಹಣ ವಶ ಹುಬ್ಬಳ್ಳಿ :ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸುಳ್ಳದ ರೋಡ್ ಕ್ರಾಸ್ ಚೆಕ್ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ.
ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ, ಎಸ್ಎಸ್ಟಿ ಹಾಗೂ ಎಫ್ಎಸ್ಟಿ 3ರ ನಾಗಾ ನಾಯ್ಕ, ಪೊಲೀಸ್ ಸಿಬ್ಬಂದಿಯೊಂದಿಗೆ ತಡೆದು ತಪಾಸಣೆ ಮಾಡಿದಾಗ ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3,82,000 ರೂಪಾಯಿ ನಗದು ಇರುವುದು ಕಂಡುಬಂದಿದೆ.
ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ - ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್, ಎ.ಎಸ್.ಐ ಆರ್ ಜಿ ನಾಯ್ಕ, ಎಎಸ್ಐಜಿಸಿ ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ಖಜಾನೆಯಲ್ಲಿ ಡಿಪಾಜಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ದಾಖಲೆ ಇಲ್ಲದೇ ಹಣ ಸಾಗಾಟ.. 11 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ ವಶ