ಕರ್ನಾಟಕ

karnataka

ETV Bharat / state

ನೈಋತ್ಯ ಮಾನ್ಸೂನ್ ಪ್ರಭಾವ: ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Karnataka Rain Forecast - KARNATAKA RAIN FORECAST

ಕರಾವಳಿ ಮತ್ತು ಒಳನಾಡಿನಲ್ಲಿ ಜುಲೈ 1ರ ವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರ್ನಾಟಕದಲ್ಲಿ ಮಳೆ
ಕರ್ನಾಟಕದಲ್ಲಿ ಮಳೆ (ETV Bharat)

By ETV Bharat Karnataka Team

Published : Jun 29, 2024, 6:07 PM IST

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ತನ್ನ ಪ್ರಭಾವ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ 3 ದಿನಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಮೀನುಗಾರರಿಗೆ ಸಹ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 1 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದೂ ಸೇರಿದಂತೆ ಮೂರು ದಿನ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆ ಬೀಳಲಿದೆ. ಇನ್ನು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ, ರಸ್ತೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ - Rain Submerges Delhi

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಆಗಿರಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ನಿನ್ನೆಯಿಂದ ಅತಿ ಹೆಚ್ಚು 10 ಸೆ.ಮೀ ಮಳೆ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಬಿದ್ದಿದೆ. ಇನ್ನು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 7 ಸೆಂ.ಮೀ ಮಳೆಯಾಗಿದೆ.

ನೈಋತ್ಯ ಮಾನ್ಸೂನ್ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಇಂದು ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ತಿಳಿಸಿದ್ದಾರೆ.

ಇದನ್ನೂ ಓದಿ: ಕಾರವಾರ: ಭಾರಿ ಮಳೆಗೆ ಕಟ್ಟಡದ ಗೋಡೆ ಕುಸಿದು ವೃದ್ಧೆ ಸಾವು - Old woman died after wall collapsed

ABOUT THE AUTHOR

...view details