ಬೆಂಗಳೂರು:ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ.
09/10/2024 ರಿಂದ 12/10/2024ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಈ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ನಂತರ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 13/10/2024ರಿಂದ 14/10/2024ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್. ಡಿ ಕೋಟೆ, ಚಾಮರಾಜನಗರ, ಹುಣಸೂರು. ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಪ್ಲೈ ಬಸ್ (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ..: