ಕರ್ನಾಟಕ

karnataka

ETV Bharat / state

ಸ್ಟೇರಿಂಗ್ ಕಟ್ ಆಗಿ ಗದ್ದೆಗೆ ನುಗಿದ್ದ ಸಾರಿಗೆ ಬಸ್: 30ಕ್ಕೂ ಹೆಚ್ಚು ಜನರಿಗೆ ಗಾಯ - Bus Accident - BUS ACCIDENT

ಸ್ಟೇರಿಂಗ್ ಕಟ್ ಆದ ಪರಿಣಾಮ ರಾಜ್ಯ ಸಾರಿಗೆ ಬಸ್​ವೊಂದು ಭತ್ತದ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.

bus accident
ಗದ್ದೆಗೆ ನುಗಿದ್ದ ಬಸ್ (ETV Bharat)

By ETV Bharat Karnataka Team

Published : May 6, 2024, 3:24 PM IST

ಗದ್ದೆಗೆ ನುಗ್ಗಿದ ಬಸ್​​ (ETV Bharat)

ಮೈಸೂರು:ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್​​​ ಏಕಾಏಕಿ ಸ್ಟೇರಿಂಗ್ ಕಟ್ ಆಗಿ ನಿಯಂತ್ರಣ ತಪ್ಪಿ, ಭತ್ತದ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಸಾಲಿಗ್ರಾಮ ಬಳಿ ಸೋಮವಾರ ನಡೆದಿದೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ.

ಕೆ.ಆರ್.ನಗರ - ಸಾಲಿಗ್ರಾಮ ರಸ್ತೆಯಲ್ಲಿ ಚಲಿಸುತ್ತಿದ್ದ ಸಾರಿಗೆ ಬಸ್​​​ನ ಸ್ಟೇರಿಂಗ್ ಕಟ್ ಆಗಿದೆ. ಇದರಿಂದ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ್ದು, ಘಟನೆಯಿಂದ ಭಯಭೀತರಾದ ಪ್ರಯಾಣಿಕರು ಕೂಡಲೇ ಕೆಳಗಿಳಿಯಲು ಯತ್ನಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಘಟನೆಯಲ್ಲಿ 30 ಕ್ಕೂ ಅಧಿಕ ಜನರಿಗೆ ಗಾಯಗಳಾಗಿದೆ. ಅದರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗದ್ದೆಗೆ ನುಗಿದ್ದ ಬಸ್ (ETV Bharat)

ಮಾಹಿತಿ ತಿಳಿದು ಸಾಲಿಗ್ರಾಮ ಹಾಗೂ ಕೆ.ಆರ್. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಕ್ಷಣ ಗಾಯಾಳುಗಳನ್ನು ಕೆ.ಆರ್. ನಗರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿನಿಯರು ಸೇರಿ ಆರು ಜನ ಸಾವು - Terrible road accident

ABOUT THE AUTHOR

...view details