ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಳೆಗೆ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಅಂಗಡಿಯಲ್ಲಿದ್ದವರು ಹಾಗೂ ಗ್ರಾಹಕರೂ ಸೇರಿ ಐದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆವ್ಯಕ್ತವಾಗಿದೆ.
ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯ ವಿವಿಧೆಡೆ ಗುಡ್ಡ ಕುಸಿತವಾಗತೊಡಗಿದೆ. ಅಂಕೋಲಾದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.