ಕಾರವಾರ: ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ತಾಯಿ ಮಗಳಿಗೆ ಕೆಎಸ್ಆರ್ಟಿಸಿ ಬಸ್ ಹಿಂದಿನಿಂದ ಗುದ್ದಿದ ಪರಿಣಾಮ ಇಬ್ಬರೂ ಮೃತಪಟ್ಟ ಹೃದಯವಿದ್ರಾಹಕ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಸಾರಸ್ವತ ಕೇರಿಯ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ. ಮೃತರನ್ನು ಸವಿತಾ ರಾಜು ಆಚಾರಿ (44) ಹಾಗೂ ಮಗಳು ಅಂಕಿತಾ ರಾಜು ಆಚಾರಿ (18) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಳಗಾವಿಗೆ ಹೊರಟ ಕೆಎಸ್ಆರ್ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಈ ಅಪಘಾತ ನಡೆದಿದೆ.
ಮುರುಡೇಶ್ವರದಿಂದ ಮಂಕಿಯ ತಾಯಿ ಮನೆಗೆ ಮಗಳೊಂದಿಗೆ ಬಂದಿದ್ದ ಸವಿತಾ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾದೆ ತಾಯಿ- ಮಗಳು ಮೃತಪಟ್ಟಿದ್ದಾರೆ. ಬಸ್ ಚಾಲಕ ಬೆಳಗಾವಿ ಜಿಲ್ಲೆಯ ಚೊಳಕಿಯ ಫಕೀರಪ್ಪ ಬೀರಪ್ಪ ಅರಗೊಡು ವಿರುದ್ಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಶ್ರೀಕಾಂತ್ ರಾಥೋಡ್ ತನಿಖೆ ಕೈಗೊಂಡಿದ್ದಾರೆ.