ಉಳ್ಳಾಲ(ದಕ್ಷಿಣ ಕನ್ನಡ):ಉಳ್ಳಾಲದ ಮಂಜನಾಡಿ ಗ್ರಾಮದ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ನಾಲ್ವರಲ್ಲಿ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದಾರೆ. ಇನ್ನೂ ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಮೃತಪಟ್ಟವರು.
ಖುಬ್ರಾ ಹಾಗೂ ಅವರ ಮೂವರು ಪುತ್ರಿಯರು ಒಂದೇ ಕೊಠಡಿಯಲ್ಲಿ ಶನಿವಾರ ರಾತ್ರಿ ಮಲಗಿದ್ದರು. ತಡರಾತ್ರಿ ಗ್ಯಾಸ್ ಸೋರಿಕೆಯಿಂದ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿತ್ತು. ಪರಿಣಾಮ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಮೃತದೇಹದ ಅಂತ್ಯಸಂಸ್ಕಾರ ಕಲ್ಕಟ್ಟ ಖಂಡಿಕ ಮನೆಯಲ್ಲಿ ಶುಕ್ರವಾರ ನಡೆಯಲಿದೆ. ಮೃತ ಖುಬ್ರಾ ಅವರ ಮೂವರು ಪುತ್ರಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ (ETV Bharat) ಘಟನೆ ಹಿನ್ನೆಲೆ:ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ತಾಯಿ ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಭಾರೀ ಸ್ಫೋಟ ಸಂಭವಿಸಿದ್ದು, ತೀವ್ರತೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ಕೊಠಡಿ ಸಂಪೂರ್ಣ ಹಾನಿಗೊಂಡಿತ್ತು. ತಾಯಿ ಮತ್ತು ಮಕ್ಕಳು ಮಲಗಿದ್ದ ಮಂಚ ಸುಟ್ಟು ಕರಕಲಾಗಿತ್ತು. ಭಾರೀ ಶಬ್ದ ಕೇಳಿದೊಡನೆ ದೊಡ್ಡ ಮಗಳು ಬಾಗಿಲು ತೆರೆದಿದ್ದಳು. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದರು. ಬಳಿಕ ಬೆಂಕಿ ನಂದಿಸಿ, ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮಕ್ಕಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಹಶೀಲ್ದಾರ್ ಪುಟ್ಟರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದನ್ನೂ ಓದಿ:ಚಿಕ್ಕಮಗಳೂರು: ಗೃಹಿಣಿಯನ್ನು ಮಕ್ಕಳೆದುರೇ ಚೂರಿಯಿಂದ ಇರಿದು, ಸಾಯದೇ ಇದ್ದಾಗ ಕೆರೆಗೆ ಎಸೆದ ಪ್ರಿಯಕರ!