ಕರ್ನಾಟಕ

karnataka

ETV Bharat / state

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕಾರಣ ನಿಗೂಢ - ಚಾಮರಾಜನಗರ

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಚಾಮರಾಜನಗರ
ಚಾಮರಾಜನಗರ

By ETV Bharat Karnataka Team

Published : Mar 3, 2024, 10:20 PM IST

ಚಾಮರಾಜನಗರ : ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹೊರೆಯಾಲ ಗ್ರಾಮದ ಜ್ಯೋತಿ (28), ತನ್ನ 7 ಹಾಗೂ 3 ವರ್ಷದ ಕಂದಮ್ಮಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಾವಿಗೆ ಶರಣಾಗಿದ್ದಾರೆ. ಜ್ಯೋತಿಗೆ ಕಳೆದ 10 ವರ್ಷಗಳ ಹಿಂದೆ ಹೊರೆಯಾಲದ ಯೋಗೇಶ್ ಎಂಬಾತನ ಜೊತೆ ವಿವಾಹ ನೆರವೇರಿತ್ತು. ಇಬ್ಬರು ಹೆಣ್ಣು ಮಕ್ಕಳು ಸಹ ಇದ್ದರು.

ಭಾನುವಾರ ರಾತ್ರಿ ಜ್ಯೋತಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ಸದ್ಯ ಬೇಗೂರು ಠಾಣೆ ಪೊಲೀಸರು ಗ್ರಾಮಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಧಾರವಾಡ: ತಾಯಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಗ

ABOUT THE AUTHOR

...view details