ಧಾರವಾಡ:ಇಬ್ಬರ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಾವಿತ್ರಿ ಸರಕಾರ (32), ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಎಂದು ಗುರುತಿಸಲಾಗಿದೆ. ಪತಿ ಉಳವಿ ಜಾತ್ರೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಧಾರವಾಡ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ - Dharwad
ತನ್ನಿಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ
Published : Feb 25, 2024, 1:30 PM IST