ಕರ್ನಾಟಕ

karnataka

ETV Bharat / state

ಪೆನ್​​ಡ್ರೈವ್ ಬಹಿರಂಗಪಡಿಸಿದ ಆರೋಪ: ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಶೀಘ್ರದಲ್ಲೇ ಬಂಧನ ಸಾಧ್ಯತೆ - Hassan Sex Scandal - HASSAN SEX SCANDAL

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ​ಬಿಡುಗಡೆ ಪ್ರಕರಣದ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಹಾಸನ ಪೆನ್​ಡ್ರೈವ್ ಬಿಡುಗಡೆ ಪ್ರಕರಣದ ಆರೋಪಿಗಳು
ಹಾಸನ ಪೆನ್​ಡ್ರೈವ್ ಬಿಡುಗಡೆ ಪ್ರಕರಣದ ಆರೋಪಿಗಳು (ETV Bharat)

By ETV Bharat Karnataka Team

Published : May 9, 2024, 8:32 AM IST

ಹಾಸನ:ಅಶ್ಲೀಲ ವಿಡಿಯೋಗಳಿರುವಪೆನ್‌ಡ್ರೈವ್‌ ಬಹಿರಂಗಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್, ಮಾಜಿ ಪುರಸಭೆ ಸದಸ್ಯ ಪುಟ್ಟರಾಜ್, ನವೀನ್ ಹಾಗೂ ಚೇತನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬುಧವಾರ ಹಾಸನದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಪ್ರಜ್ವಲ್ ಅವರದ್ದೆನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ ಬಿಡುಗಡೆ ಆರೋಪದಡಿ ಈ ನಾಲ್ವರ ವಿರುದ್ಧ ಜೆಡಿಎಸ್ ಚುನಾವಣೆ ಏಜೆಂಟ್ ಆಗಿದ್ದ ಪೂರ್ಣಚಂದ್ರ ತೇಜಸ್ವಿ ಅವರು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು. ಬಳಿಕ ಆರೋಪಿಗಳು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್, ನಿರೀಕ್ಷಣಾ ಜಾಮೀನು ವಜಾ ಮಾಡಿದ್ದರಿಂದ ಆರೋಪಿಗಳಿಗೆ ಬಂಧನ ಭೀತಿ ಎದುರಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ವಾಟ್ಸ್‌ಆ್ಯಪ್ ಮತ್ತು ಫೇಸ್‌ಬುಕ್​​ನಲ್ಲಿ ನವೀನ್ ಪೋಸ್ಟ್ ಹಾಕಿದ್ದರು. ಅದು ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಆ ಬಳಿಕ ನವೀನ್ ವಿರುದ್ಧ ಜೆಡಿಎಸ್ ದೂರು ದಾಖಲಿಸಿತ್ತು. ಪೆನ್​ ಡ್ರೈವ್​ ಬಹಿರಂಗದಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಮಾಜಿ ಪುರಸಭೆ ಸದಸ್ಯ ಪುಟ್ಟರಾಜ್, ಚೇತನ್​ ಅವರ ಪಾತ್ರವೂ ಇದೆ ಎಂದು ಜೆಡಿಎಸ್ ಆರೋಪಿಸಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್‌ಬುಕ್ ಅಕೌಂಟ್ ಡಿಲೀಟ್ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸದ್ಯ ಎಸ್​ಐಟಿ ತೀವ್ರಗೊಳಿಸಿದೆ.

ಇದನ್ನೂ ಓದಿ:ಪ್ರಜ್ವಲ್ ಹಾಗೂ ರೇವಣ್ಣ ಅವರನ್ನೇ ಟಾರ್ಗೆಟ್ ಮಾಡಿರುವುದು ಏಕೆ?: ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿ - H D Kumaraswamy

ABOUT THE AUTHOR

...view details