ಕರ್ನಾಟಕ

karnataka

ETV Bharat / state

ಬಿಜೆಪಿಯಲ್ಲಿ ಬಣ ರಾಜಕೀಯದ ವಿಚಾರ ನನಗೆ ಗೊತ್ತಿಲ್ಲ: ಸಂಸದ ರಮೇಶ್ ಜಿಗಜಿಣಗಿ - Har Ghar Tiranga Campaign - HAR GHAR TIRANGA CAMPAIGN

ಬಿಜೆಪಿ ಹಮ್ಮಿಕೊಂಡಿರುವ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಣ ರಾಜಕೀಯದ ಕುರಿತು ಗೊತ್ತಿಲ್ಲ ಎಂದರು.

MP RAMESH JIGAJINAGI  POLITICS IN BJP  INDEPENDENCE DAY  VIJAYAPURA
ವಿಜಯಪುರದಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ (ETV Bharat)

By ETV Bharat Karnataka Team

Published : Aug 13, 2024, 9:58 PM IST

ವಿಜಯಪುರದಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ (ETV Bharat)

ವಿಜಯಪುರ:ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರು ಇಂದು ನಗರದ ಶ್ರೀ ಚಿದಂಬರೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಬಿಜೆಪಿ ಮುಖಂಡರೊಬ್ಬರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಮುಖೇನ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಂಸದ‌ ಜಿಗಜಿಣಗಿ, ಇತ್ತೀಚಿಗೆ ಬೆಳಗಾವಿಯಲ್ಲಿ ಅತೃಪ್ತ ಬಿಜೆಪಿ ಮುಖಂಡರ ಸಭೆಯ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನನಗೆ ಯಾವುದೇ ಬಣ ಎಂದು ಗೊತ್ತಿಲ್ಲ. ಚಿಕ್ಕೋಡಿ ಭಾಗದಲ್ಲಿ ಭಿನ್ನಾಭಿಪ್ರಾಯವಿದೆ ಎಂದು ನನಗನಿಸಿಲ್ಲ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತಿರಬಹುದು. ಸೋಲಿಗೆ ಹಲವು ಕಾರಣಗಳಿರುತ್ತವೆ. ಪುಕ್ಕಟೆ ಹಂಚುವುದು, ಹೆಣ್ಣು ಮಕ್ಕಳಿಗೆ ಹಣ ಕೊಡುವುದು ಕಾರಣ ಆಗಿರಬಹುದು. 2019ರ ಚುನಾವಣೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವಾಗಿತ್ತು. ಈ ಬಾರಿ ನಾನು 70,000 ಮತಗಳ ಅಂತರದಿಂದ ಗೆದ್ದಿದ್ದೇನೆ. ಈ ಬಾರಿ ಮಹಿಳೆಯರೆಲ್ಲ ನನಗೆ ಓಟು ಹಾಕಿದ್ರಾ?. ಭಾಗ್ಯಲಕ್ಷ್ಮಿ ಯೋಜನೆಯ ಪರಿಣಾಮ ಮಹಿಳೆಯರ ಮತಗಳು ಬೀಳಲಿಲ್ಲ ಎಂದರು.

ಪಕ್ಷದ ಆದೇಶದ ಮೇರೆಗೆ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿರುವ ನಮ್ಮ ರಾಷ್ಟ್ರಧ್ವಜವನ್ನು ಮನೆ ಮನೆಯಲ್ಲಿ ಹಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಈ ಅಪೂರ್ವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಪ್ರತಿಯೊಬ್ಬರ ಭಾರತೀಯನ ಕರ್ತವ್ಯ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ವಿಧಾನ ಪರಿಷತ್‌ ಸದಸ್ಯ ಅರುಣ್‌ಶಹಾಪೂರ, ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮುಖಂಡರಾದ ಸುರೇಶ ಬಿರಾದಾರ ಸೇರಿದಂತೆ ಇನ್ನಿತರ ಮುಖಂಡರು ಮತ್ತು ಬಿಜೆಪಿ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ:ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫೀಸಾ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿ; ರಾಜ್ಯದಲ್ಲಿ 6 ಗ್ರಾ.ಪಂ ಅಧ್ಯಕ್ಷರಿಗೆ ಈ ಗೌರವ - Independence Day Special Guest

ABOUT THE AUTHOR

...view details