ಬಾಗಲಕೋಟೆ: ವಿಜಯಪುರದಿಂದ ಬೆಳಗಾವಿಗೆ ಹೊರಟಿದ್ದ ಸಂಸದ ರಮೇಶ ಜಿಗಜಿಣಗಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಬಾಗಲಕೋಟೆ ಬವಿವ ಸಂಘದ ಹಾನಗಲ್ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಗಜಿಣಗಿ ಅವರಿಗೆ ವಾಹನದಲ್ಲಿ ದಿಢೀರ್ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆತಂದಾಗ ಲಘು ಹೃದಾಯಾಘಾತವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ವಿಜಯಪುರ ಸಂಸದ ರಮೇಶ ಜಿಗಜಿಣಗಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು - mild heart attack
ಸಂಸದ ರಮೇಶ ಜಿಗಜಿಣಗಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿರುವ ಹಿನ್ನೆಲೆ ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈಗ ಚೇತರಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
![ವಿಜಯಪುರ ಸಂಸದ ರಮೇಶ ಜಿಗಜಿಣಗಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು MP Ramesh Jigajinagi](https://etvbharatimages.akamaized.net/etvbharat/prod-images/28-01-2024/1200-675-20612871-thumbnail-16x9-bgdk.jpg)
Published : Jan 28, 2024, 8:35 PM IST
|Updated : Jan 28, 2024, 10:50 PM IST
ಸಂಘದ ಕಾರ್ಯಾಧ್ಯಕ್ಷ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು HSK ಆಸ್ಪತ್ರೆಯಲ್ಲಿದ್ದು, ಜಿಗಜಿಣಗಿ ಅವರ ಚಿಕಿತ್ಸೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಂಸದರ ಎದೆಯ ಒಂದು ರಂಧ್ರದಲ್ಲಿ ನೀರು ತುಂಬಿರುವುದರಿಂದ ಸಮಸ್ಯೆ ಆಗಿದೆ ಎನ್ನಲಾಗಿದೆ. ಹಿರಿಯ ತಜ್ಞರಾದ ಡಾ. ಸುಭಾಸ್ ಪಾಟೀಲ, ಡಾ. ಸಮೀರ್ ಕುಮಾರ್ ಅವರು ಇಕೋ ಪ್ರಕ್ರಿಯೆ ನಡೆಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆಪ್ತರ ಮಾಹಿತಿ ಪ್ರಕಾರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ 15 ದಿನದಲ್ಲಿ ಎರಡನೇ ಬಾರಿಗೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ಸಂಸದ ಜಿಗಜಿಣಗಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿ, ರಮೇಶ ಜಿಗಜಿಣಗಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈಗ ಚೇತರಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.