ಮೈಸೂರು:ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಇದಕ್ಕೆ ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, "ಕಾರ್ಡ್ ಹೊಂದಿರದ (ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು" ಭರವಸೆ ನೀಡಿದರು.