ಮೈಸೂರು:ಮೈಸೂರು ವಿಮಾನ ನಿಲ್ದಾಣದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ, ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡುಗೆ, ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರಿಯಾಗಿರುವ ಮೈಸೂರಿಗೆ ಪ್ರವಾಸೋದ್ಯಮ ಉದ್ಯಮವಾಗಿ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಮೈಸೂರಿನಿಂದ ಕೊಚ್ಚಿನ್, ಗೋವಾ, ಮುಂಬೈ, ಹೈದರಾಬಾದ್ ಹಾಗೂ ವಿಜಯವಾಡ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಬೇಕು ಎಂದು ಸಚಿವರನ್ನು ಭೇಟಿಯಾಗಿ ಸಂಸದರು ಮನವಿ ಮಾಡಿದ್ದಾರೆ.
ಪ್ರವಾಸೋದ್ಯಮ, ಆರ್ಥಿಕ ಮತ್ತು ಸರ್ವತ್ತೋಮುಖ ಬೆಳವಣಿಗೆಗೆ, ಮೈಸೂರು ವಿಮಾನ ನಿಲ್ದಾಣ ಸಮೀಪದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದ್ದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಿರುತ್ತದೆ. ಸದ್ಯಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ 2 ವಿಮಾನಗಳು ಮಾತ್ರ ಹಾರಾಟ ನಡೆಸುತ್ತಿವೆ. ಇದು ಸ್ಥಳೀಯರು, ಪ್ರವಾಸಿಗರು, ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಿಲ್ಲ ಎಂದು ತಿಳಿಸಿದ್ದಾರೆ.