ಬೆಂಗಳೂರು: 'ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ' ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
'ಸಿದ್ದರಾಮಯ್ಯನವರೇ ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ' ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
'Karma Hit back ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?. ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ' ಎಂದಿದ್ದಾರೆ.