ಕರ್ನಾಟಕ

karnataka

ETV Bharat / state

ಮುಡಾ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಸಂಸದ ಜಿ. ಕುಮಾರ್ ನಾಯ್ಕ್

ಇಡಿ ನೋಟಿಸ್​ ಜಾರಿ ಮಾಡಿದ್ದ ಹಿನ್ನೆಲೆ ರಾಯಚೂರು ಸಂಸದ ಜಿ. ಕುಮಾರ್ ನಾಯ್ಕ್ ಇಂದು ಮುಡಾ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದಾರೆ.

MP G Kumar Naik
ಸಂಸದ ಜಿ.ಕುಮಾರ್ ನಾಯ್ಕ್ (ETV Bharat)

By ETV Bharat Karnataka Team

Published : Nov 13, 2024, 1:02 PM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರ್ ನಾಯ್ಕ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ರಾಯಚೂರು ಸಂಸದರಾಗಿರುವ ಜಿ. ಕುಮಾರ್ ನಾಯ್ಕ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದರು.

ಮಾಜಿ ಐಎಎಸ್ ಅಧಿಕಾರಿಯಾಗಿರುವ ಕುಮಾರ್ ನಾಯ್ಕ್ ಅವರು 2002ರಿಂದ 2005ರ ವರೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಅದೇ ಅವಧಿಯಲ್ಲಿ ಭೂಪರಿವರ್ತನೆ ಮಾಡಲಾಗಿತ್ತು. ಆಗ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಇತ್ತೀಚೆಗೆ ಕುಮಾರ್ ನಾಯ್ಕ್ ಅವರನ್ನು ವಿಚಾರಣೆ ನಡೆಸಿದ್ದರು‌. ಇದೀಗ ಇಡಿಯಿಂದಲೂ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಶಾಂತಿನಗರದ ಕಚೇರಿಗೆ ಕುಮಾರ್ ನಾಯ್ಕ್ ಹಾಜರಾಗಿದ್ದಾರೆ.

ಇದನ್ನೂ ಓದಿ:ಮೊದಲ ಬಾರಿಗೆ ಮುಡಾ ಕಚೇರಿಗೆ ಭೇಟಿ ನೀಡಿದ ನಿವೃತ್ತ ನ್ಯಾ.ದೇಸಾಯಿ

ABOUT THE AUTHOR

...view details