ಕರ್ನಾಟಕ

karnataka

ETV Bharat / state

ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಹೆಚ್‌ಡಿಕೆ - H D Kumaraswamy

ಕೇಂದ್ರ ಸಚಿವ ಹೆಚ್.​ಡಿ.ಕುಮಾರಸ್ವಾಮಿ ಅವರಿಂದು ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮುಡಾ ಹಗರಣದ ಕುರಿತು ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದರು.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.​ಡಿ.ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Jul 5, 2024, 12:36 PM IST

ಕೇಂದ್ರ ಸಚಿವ ಹೆಚ್.​ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ (ETV Bharat)

ಮೈಸೂರು:"ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದವರ ಪಾತ್ರ ಮುಡಾ ಹಗರಣ ಹೊರಬರಲು ಕಾರಣ" ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಹೆಚ್.​ಡಿ.ಕುಮಾರಸ್ವಾಮಿ (ETV Bharat)

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

"ಇಷ್ಟು ದಿನ ಹೊರಬರದ ಹಗರಣ ಇದಕ್ಕಿದ್ದಂತೆ ಹೇಗೆ ಹೊರಬಂತು? ಇದರ ಹಿಂದಿರುವ ಪಾತ್ರ ಯಾರದೆಂಬುದು ನನಗೆ ಗೊತ್ತಿದೆ" ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದರು.

"ಮುಡಾ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಹೊರಬರಲು ಕಾಂಗ್ರೆಸ್​ನ ಪ್ರಭಾವಿ, ಮುಖ್ಯಮಂತ್ರಿ ಆಕಾಂಕ್ಷಿಯ ಕೈವಾಡವಿದೆ. ಈಗ ಸಿಡಿ ಫ್ಯಾಕ್ಟರಿ ಬಂದ್ ಆಯಿತು, ಮುಡಾ ಫ್ಯಾಕ್ಟರಿ ಶುರುವಾಯಿತು" ಎಂದು ಟಾಂಗ್ ಕೊಟ್ಟರು.

ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್‌ಡಿಕೆ (ETV Bharat)

"ಸಿಎಂ ಸಿದ್ದರಾಮಯ್ಯ ಪತ್ನಿಯ ಹೆಸರಿಗೆ ಕೋಟಿ ರೂಪಾಯಿಗಳ ಭೂಮಿ ಹೇಗೆ ಬಂತು? ಅದಕ್ಕೆ ಈಗ 62 ಕೋಟಿ ರೂಪಾಯಿ ಪರಿಹಾರ ಕೇಳುತ್ತಿರುವುದು ಸರಿಯಲ್ಲ. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಂಡು, ಪರಿಹಾರ ನೀಡದೇ ಸತ್ತಾಯಿಸುತ್ತಿರುವ ಮುಖ್ಯಮಂತ್ರಿಗಳು ರೈತರಿಗೆ ಮೊದಲು ಪರಿಹಾರ ಕೊಡಿಸಲಿ. ಆ ಬಳಿಕ ತಮ್ಮ ಪತ್ನಿಯ ಹೆಸರಿನಲ್ಲಿ ಕಳೆದುಕೊಂಡಿರುವ ಭೂಮಿಗೆ ಪರಿಹಾರ ಕೇಳಲಿ" ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿಂದು ಜನತಾ ದರ್ಶನ:ಇವತ್ತು ಕೇಂದ್ರದ ಮಂತ್ರಿಯಾಗಿ, ಮಂಡ್ಯ ಸಂಸದನಾಗಿ, ಮಂಡ್ಯದಲ್ಲಿ ಜನತಾ ದರ್ಶನ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಆದರೆ ಮುಖ್ಯಮಂತ್ರಿಗಳು ಹಾಗೂ ಉಸ್ತುವಾರಿ ಸಚಿವರು ಮಾತ್ರ ಜನತಾ ದರ್ಶನ ಮಾಡಬಹುದು ಎಂಬ ಸರ್ಕಾರದ ಸುತ್ತೋಲೆಯ ಮೂಲಕ ನಮ್ಮ ಜನತಾ ದರ್ಶನವನ್ನು ನಿಲ್ಲಿಸುವ ಪ್ರಯತ್ನ ನಡೆಸಲಾಗಿದೆ ಎಂದು ಇದೇ ವೇಳೆ ದೂರಿದರು.

ಬೆಂಗಳೂರು ಗ್ರಾಮಾಂತರದ ಮಾಜಿ ಎಂಪಿ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ವಿರುದ್ಧವೂ ಚನ್ನಪಟ್ಟಣದ ವಿಚಾರದಲ್ಲಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಪತ್ನಿಗೆ ಸೇರಿದ ನಿವೇಶನದಲ್ಲಿ ಬಿಜೆಪಿ ರಾಜಕೀಯ: ಎ.ಎಸ್.ಪೊನ್ನಣ್ಣ - MUDA Plot Allotment

ಮಂಡ್ಯದಲ್ಲಿಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನತಾ ದರ್ಶನ - Janata Darshan

ABOUT THE AUTHOR

...view details