ಕರ್ನಾಟಕ

karnataka

ETV Bharat / state

ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಹಂತಕರು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ - KILLERS WAS CAUGHT ON CCTV - KILLERS WAS CAUGHT ON CCTV

ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಗಳು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Murder case  Gadag  CCTV camera Murder case of family members
ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಹಂತಕರು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

By ETV Bharat Karnataka Team

Published : Apr 22, 2024, 10:18 AM IST

Updated : Apr 22, 2024, 12:52 PM IST

ಹಂತಕರು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ಇತ್ತೀಚೆಗೆ ನಡೆದಿತ್ತು. ಈ ಕೊಲೆ ಪ್ರಕರಣದ ಆರೋಪಿಗಳು ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಸರ ಓಣಿಯ‌ ಬಾಕಳೆ ಅವರ ಮನೆಯ ಹಿಂಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಹಂತಕರ ಹೆಜ್ಜೆ ಗುರುತು ಪತ್ತೆಯಾಗಿದೆ. ಹತ್ಯೆ ನಂತರ ಮನೆ ಹಿಂಬದಿಯ ಚರಂಡಿಯಲ್ಲಿ ಚಾಕು ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಬಾಕಳೆ ಕುಟುಂಬದ ನಾಲ್ವರನ್ನ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಐವರು ಹಂತಕರು ಸೇರಿ ನಡೆಸಿರುವ ಭೀಕರ ಕೃತ್ಯ ಬಯಲಾಗಿದೆ. ಪೂರ್ವನಿಯೋಜಿತ ಕೃತ್ಯವಾಗಿದ್ದು, ಕೌಟುಂಬಿಕ ಹಾಗೂ ವ್ಯವಹಾರಿಕ ಹಿನ್ನೆಲೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಎಲ್ಲ ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಂತಕರ ಪತ್ತೆಗಾಗಿ ಒಟ್ಟು ಐದು ತಂಡ ರಚಿಸಲಾಗಿದೆ. ಆದಷ್ಟು ಬೇಗ ಹಂತಕರ ಬಂಧನ ಮಾಡಲಾಗುವುದು ಎಂದು ಎಸ್ಪಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.

ಹತ್ಯೆ ಪ್ರಕರಣದ ಹಿನ್ನೆಲೆ: ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಅವರನ್ನು ದುಷ್ಕರ್ಮಿಗಳು ಏ.19 ರಂದು ಬೆಳಗಿನ ಜಾವ 3 ಗಂಟೆಗೆ ಹತ್ಯೆ ಮಾಡಿದ್ದರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ಕೆ ಕೊಪ್ಪಳದಿಂದ ಪರಶುರಾಮ ಕುಟುಂಬದ ಸದಸ್ಯರು ಬಂದಿದ್ದರು. ಪರಶುರಾಮ ಅವರು, ಸುನಂದಾ ಬಾಕಳೆ ಪತಿ ಪ್ರಕಾಶ್ ಬಾಕಳೆ ಅವರ ಮೊದಲನೇ ಹೆಂಡತಿ ಸಹೋದರ ಆಗಿದ್ದಾರೆ. ಬಾಕಳೆ ಕುಟುಂಬವನ್ನು ಟಾರ್ಗೆಟ್ ಮಾಡಿ ಹತ್ಯೆಗೆ ಸಂಚು ರೂಪಿಸಿರುವುದು ತಿಳಿದು ಬಂದಿದೆ. ಮನೆಯಲ್ಲಿದ್ದ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

''ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡಲು ಏಪ್ರಿಲ್ 17 ರಂದು ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಬಂದಿದ್ದರು. ಬಾಗಿಲು ಶಬ್ಧ ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡುತ್ತಿದ್ದೆವು. ದೂರವಾಣಿ ಕರೆ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಒಂದು ವೇಳೆ ನಾವಿದ್ದ ಕೊಠಡಿಯ ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು'' ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ತಿಳಿಸಿದ್ದರು. ಈ ಘಟನೆಯಿಂದ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ:ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಜನರ ಸಾವು; ಹುಬ್ಬಳ್ಳಿಯ ನೂತನ ಮನೆಯಲ್ಲಿ ನೀರವ ಮೌನ - 6 people death in Kali river

Last Updated : Apr 22, 2024, 12:52 PM IST

ABOUT THE AUTHOR

...view details