ಹುಬ್ಬಳ್ಳಿ:ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರೂರು ಗ್ರಾಮದ ಜಗದೀಶ ಡಾಬಾದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ವರೂರು ಗ್ರಾಮದ ಸುಧೀರ ಹುಲಗಣ್ಣವರ್ (31) ಕೊಲೆಯಾದ ಯುವಕನಾಗಿದ್ದಾನೆ.
ಹುಬ್ಬಳ್ಳಿ: ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ - stabbed to death in Hubli
ಹಣಕಾಸಿನ ವಿಚಾರವಾಗಿ ಇಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Published : Mar 16, 2024, 12:30 PM IST
ಗ್ರಾಮದ ಸಾಗರ ಮಹಾದೇವಪ್ಪ ಗಬ್ಬನ್ನವರ ಹಾಗೂ ಸುಧೀರ್ ಮಧ್ಯೆ ಡಾಬಾದಲ್ಲಿ ಊಟ ಮಾಡುವ ವೇಳೆ ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ಮೇಲೆ ಸಾಗರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಸುಧೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಅಲ್ಲಿಂದ ಸಾಗರ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ