ಕರ್ನಾಟಕ

karnataka

ETV Bharat / state

ಮೈಸೂರಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿಗಾಹುತಿ; ದಂಪತಿ ಪ್ರಾಣಾಪಾಯದಿಂದ ಪಾರು - ಮೈಸೂರು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ದಟ್ಟಗಳ್ಳಿ ರಿಂಗ್ ರಸ್ತೆಯ ಸಾ ರಾ ಕನ್ವೆನ್ಷನ್ ಹಾಲ್ ಎದುರು ನಡೆದಿದೆ. ಈ ಘಟನೆ ಕುರಿತು ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

car crashes into electric pole
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿಗಾಹುತಿ

By ETV Bharat Karnataka Team

Published : Mar 3, 2024, 10:49 PM IST

Updated : Mar 3, 2024, 10:55 PM IST

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿಗಾಹುತಿ

ಮೈಸೂರು:ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅದರಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟ‌ನೆ ದಟ್ಟಗಳ್ಳಿ ರಿಂಗ್ ರಸ್ತೆಯ ಸಾ ರಾ ಕನ್ವೆನ್ಷನ್ ಹಾಲ್ ಎದುರು ಭಾನುವಾರ ಬೆಳಗ್ಗೆ ಸಂಭವಿಸಿದೆ.

ಕುವೆಂಪು ನಗರದ ನಿವಾಸಿ ಚಂದ್ರು ಹಾಗೂ ಪತ್ನಿ ನೇಹಾ ಎಂಬ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಂದ್ರು- ನೇಹಾ ದಂಪತಿ ಕಾರಿನಲ್ಲಿ ದಟ್ಟಗಳ್ಳಿ ಕಡೆ ತೆರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಸ್ಫೋಟಗೊಂಡಿದೆ. ಇದರಿಂದ ಕಾರು ಚಾಲನೆಯಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ದಂಪತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಕೂಡ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಜಾಹ್ನವಿ, ಎಸಿಪಿ ಪರಶುರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕಾರಣ ನಿಗೂಢ

Last Updated : Mar 3, 2024, 10:55 PM IST

ABOUT THE AUTHOR

...view details