ಕರ್ನಾಟಕ

karnataka

ETV Bharat / state

ನೀರಿನ ಸಮಸ್ಯೆ ಇರುವ ಸ್ಥಳಕ್ಕೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಬಗೆಹರಿಸಿ: ಜಿಪಂ ಸಿಇಒ ಗಾಯಿತ್ರಿ - ನೀರಿನ ಸಮಸ್ಯೆ

ಮೈಸೂರು ಮುಖ್ಯಮಂತ್ರಿಗಳ ತವರು ಜಿಲ್ಲೆ ಆಗಿದ್ದರಿಂದ ಇಲ್ಲಿ ಯಾವುದೇ ರೀತಿಯ ಕೆಲಸಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು. ಜನರಿಗೆ ನೀರಿನ ಸಮಸ್ಯೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಕೆ ಎಂ ಗಾಯಿತ್ರಿ ಸೂಚಿಸಿದರು.

ಮೈಸೂರು ಜಿಪಂ  ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಮೈಸೂರು ಜಿಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಇಒ ಕೆ ಎಂ ಗಾಯಿತ್ರಿ ಮಾತನಾಡಿದರು.

By ETV Bharat Karnataka Team

Published : Feb 17, 2024, 7:53 PM IST

ಮೈಸೂರು:ನೀರಿನ ಸಮಸ್ಯೆ ಇರುವ ಜಿಲ್ಲೆಯ ವಿವಿಧ ಗ್ರಾಪಂ ವ್ಯಾಪ್ತಿ ಬರುವ ಹಾಡಿಯಲ್ಲಿ ವಾಸವಿರುವ ಜನರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಹಾಡಿಯಲ್ಲಿ ಸ್ಮಶಾನ, ಗೋಮಾಳ ಇತ್ಯಾದಿ ಕುಂದುಕೊರತೆ ಕಂಡುಬಂದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೆ ಎಂ ಗಾಯಿತ್ರಿ ಸೂಚಿಸಿದರು.

ಜಿಪಂ ಅಬ್ದುಲ್ ನಜೀರ್​ ಸಾಬ್ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಕುಡಿವ ನೀರಿನ ಸಮಸ್ಯೆ ಇರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಬಗೆಹರಿಸಬೇಕು. ಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಪ್ರತಿಯೊಬ್ಬರಿಗೂ ನೀರು ಅತ್ಯಗತ್ಯ. ಮುಂದೆ ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮೊದಲು ಗ್ರಾಮಗಳಲ್ಲಿ ಇರುವ ಬಾವಿ, ಕೆರೆ, ಬೋರ್​ವೆಲ್ ಗಳಲ್ಲಿ ನೀರಿನ ಮಟ್ಟವನ್ನು ಪರೀಕ್ಷಿಸಿ ಕಡಿಮೆಯಾಗಿರುವುದು ಕಂಡುಬಂದರೆ ನೀರನ್ನು ತುಂಬಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಬೇಸಿಗೆಯಲ್ಲಿ ಡೀ ಹೈಡ್ರೇಟ್, ಸಾಂಕ್ರಾಮಿಕ ರೋಗ:ಇದು ಬೇಸಿಗೆ ಸಮಯವಾದ್ದರಿಂದ ಡೀ ಹೈಡ್ರೇಟ್, ಸಾಂಕ್ರಾಮಿಕ ರೋಗ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ತಮ್ಮ ತಮ್ಮ ಗ್ರಾಪಂ ವ್ಯಾಪ್ತಿ ಬರುವ ಗ್ರಾಮಗಳಲ್ಲಿ ಜನರಿಗೆ ವೈದ್ಯಕೀಯ ಇಲಾಖೆಯಿಂದ ಬಂದ ಮಾಹಿತಿ ತಲುಪಿಸಿ, ಅವರಿಗೆ ಸರಿಯಾದ ಆರೋಗ್ಯ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.

ಚರಂಡಿಗಳು, ರಸ್ತೆ ಬದಿಗಳು, ನೀರಿನ ಟ್ಯಾಂಕರ್​ಗಳನ್ನು, ಬೋರ್​ವೆಲ್​ಗಳನ್ನು ಸ್ವಚ್ಛಗೊಳಿಸಿ ಗ್ರಾಮವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಗಳು ಶುಚಿ ಮಹತ್ವವನ್ನು ಗ್ರಾಮ-ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಇಲಾಖೆಯ ಅಧಿಕಾರಿಗಳು ತಾವು ಮಾಡುವ ಪ್ರತಿಯೊಂದು ಕೆಲಸದ ದಾಖಲೆಗಳನ್ನು ಪ್ರತ್ಯೇಕ ಫೈಲ್ ಮಾಡಬೇಕು. ಇದರಿಂದ ಎಲ್ಲಾ ಕೆಲಸಗಳ ಒಂದು ಚಿತ್ರಣ ಹುಡುಕುವುದು ಸುಲಭವಾಗುತ್ತದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ್ದರಿಂದ ಇಲ್ಲಿ ಯಾವುದೇ ರೀತಿಯ ಕೆಲಸಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು. ಜನರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಹಾಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಪ್ರತಿಯೊಬ್ಬ ವ್ಯಕ್ತಿಗೂ ಸೌಲಭ್ಯ ದೊರಕಬೇಕು:ಜಿಪಂ ಉಪಕಾರ್ಯದರ್ಶಿ ಕೃಷ್ಣರಾಜು ಡಿ.ಎಸ್ ಅವರು ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಮನೆ ಮನೆಗೂ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ವಸತಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸಿ ಜನರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಅವರಿಂದ ಸರಿಯಾದ ದಾಖಲೆಗಳನ್ನು ಪಡೆಯಬೇಕು. ಇದರಿಂದ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆಯಲ್ಲಿ ಅಂತರ ಕಡಿಮೆಯಾಗಬೇಕು. ಅವಶ್ಯಕತೆ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಸೌಲಭ್ಯ ದೊರಕುವಂತೆ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಮೈಸೂರು ಜಿಲ್ಲೆಯ ಗ್ರಾಪಂ ಪಿಡಿಒಗಳು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸೇರಿಸಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಇದನ್ನೂಓದಿ:ಸಾಮಾಜಿಕ ನ್ಯಾಯ, ಅಭಿವೃದ್ಧಿ ಸರಿದೂಗಿಸುವ ಬಜೆಟ್​ನ್ನು ಸಿಎಂ ನೀಡಿದ್ದಾರೆ : ಎಂ ಬಿ ಪಾಟೀಲ್‌

ABOUT THE AUTHOR

...view details