ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಏನಿದು ಪ್ರಕರಣ?: ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಸ್ನೇಹಮಯಿ ಕೃಷ್ಣ ಅವರಿಗೆ ಶಿಕ್ಷೆ ಪ್ರಕಟಿಸಿದೆ.