ಕರ್ನಾಟಕ

karnataka

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗ್ತಾರೆ: ಗುಣಧರ ನಂದಿ ಮಹಾರಾಜರ ಭವಿಷ್ಯ

By ETV Bharat Karnataka Team

Published : Feb 28, 2024, 9:41 PM IST

ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಶ್ರೀ ಪದ್ಮಾವತಿ ದೇವಿ ಶಕ್ತಿಪೀಠ ಶಿಲಾನ್ಯಾಸ, ಜೈನ ಎಜಿಎಂ ಆಯುರ್ವೇದಿಕ್​ ಮೆಡಿಕಲ್ ಕಾಲೇಜು ಹಾಗೂ ಎಜಿಎಂಆರ್ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಭವನ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನಡೆಯಿತು. ಈ ಸಂದರ್ಭದಲ್ಲಿ ಗುಣಧರ ನಂದಿ ಮಹಾರಾಜರು ಮಾತನಾಡಿದರು.

shree Padmavati Devi Shaktipeeth foundation stone laying ceremony ​
ವರೂರ ಮಾತೋಶ್ರೀ ಪದ್ಮಾವತಿ ದೇವಿ ಶಕ್ತಿಪೀಠ ಶಿಲಾನ್ಯಾಸ ಸಮಾರಂಭ

ಹುಬ್ಬಳ್ಳಿ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ವರೂರು ಪೀಠದ ರಾಷ್ಟ್ರಸಂತ ಆಚಾರ್ಯ 108 ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.

ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಇಂದು ಮಾತೋಶ್ರೀ ಪದ್ಮಾವತಿ ದೇವಿ ಶಕ್ತಿ ಪೀಠದ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಡಿಮೆಯೆಂದ್ರರೂ 400 ಕಿ.ಮೀ. ಸುತ್ತಿದ್ದೇನೆ. ಎಲ್ಲೆಡೆ ಜನ ಮೋದಿ ಅವರಿಗೆ ಜೈಕಾರ ಹಾಕುತ್ತಿದ್ದಾರೆ. ಅವರು ಕೈಗೊಂಡ ರಾಷ್ಟ್ರ ಕಲ್ಯಾಣ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಗುಣಧರ ನಂದಿ ಮಹಾರಾಜರು ಕಾಣಿಕೆ ವಿತರಿಸಿದರು.

ಮೋದಿ ಅವರು ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ ಕಾರ್ಯಗಳನ್ನು ಮಾಡಿದ್ದಾರೆ. ಬಹಳ ಪ್ರಮುಖವಾಗಿ ನಾಲ್ಕು ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣ ಮಾಡಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಕೋವಿಡ್ ಸಂಕಷ್ಟದಲ್ಲಿ ಕೋಟ್ಯಂತರ ಭಾರತೀಯರ ಜೀವ ಉಳಿಸಿದ್ದಾರೆ. ಜಮ್ಮು ಕಾಶ್ಮೀರ ಜನರಿಗೆ ನೆಮ್ಮದಿಯ ಜೀವನ ಕಲ್ಫಿಸಿದ್ದಾರೆ. ಯುಕ್ರೇನ್ ಯುದ್ಧದ ವೇಳೆ ಅಲ್ಲಿನ ಭಾರತೀಯರನ್ನು ರಕ್ಷಿಸಿ ಕರೆ ತಂದಿದ್ದಾರೆ. ಹೀಗೆ ದೇಶದೊಳಗೆ ಮಾತ್ರವಲ್ಲ, ದೇಶದ ಹೊರಗಿದ್ದ ಭಾರತೀಯರನ್ನೂ ರಕ್ಷಿಸಿದ್ದಾರೆ ಎಂದು ಗುಣಧರ ನಂದಿ ಮಹಾರಾಜರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಚಾರ್ಯ ಡಾ.ಲೋಕೇಶ್ ಮುನಿಜೀ, ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್, ಸಂಸದೀಯ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎಂ.ಆರ್.ಪಾಟೀಲ, ಅಭಯ್ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ರಷ್ಯಾ ಸೇನೆಯಲ್ಲಿ ಸಿಲುಕಿದ ಭಾರತೀಯರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ: ಚಿಕ್ಕೋಡಿಯಲ್ಲಿ ಎಸ್.ಜೈಶಂಕರ್

ABOUT THE AUTHOR

...view details