ಬಸವರಾಜ ಬೊಮ್ಮಾಯಿ ಮತ್ತು ಪ್ರಹ್ಲಾದ ಜೋಶಿ ಹೇಳಿಕೆಗಳು ಹುಬ್ಬಳ್ಳಿ:ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರ ಮನವೊಲಿಸುವ ಕೆಲಸ ಆಗುತ್ತದೆ. ನಮ್ಮ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿರಬಹುದು. ಕ್ಷೇತ್ರ ಬದಲಾವಣೆ ಕುರಿತು ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.
ಇಂದು ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಮಾಡುತ್ತೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡ್ತಿದ್ದೀವಿ. ಇಲ್ಲಿ ಪ್ರಲ್ಹಾದ್ ಜೋಶಿ ಅವರಿಗೂ ಆಹ್ವಾನ ಕೊಡಲಾಗಿದೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜೋಶಿ ಅವರಿಗೆ ಕಳೆದ ಬಾರಿಗಿಂತ ಹೆಚ್ಚಿನ ಲೀಡ್ ಕೊಡಿಸುತ್ತೇವೆ ಎಂದು ಹೇಳಿದರು.
ನಾಳೆ ಹಾವೇರಿ ಲೋಕಸಭೆ ವ್ಯಾಪ್ತಿಯ ಗದಗ ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಅಲ್ಲಿಯೂ ಪ್ರಚಾರ ನಡೆಸಲಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
ಬೆಳಗಾವಿಗೆ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆ:ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಅವರ ಹೆಸರೇ ಮುಂಚೂಣಿಯಲ್ಲಿದೆ. ಅವರೂ ಅಲ್ಲಿ ಸ್ಪರ್ಧಿಸಲು ಒಪ್ಪಿದ್ದಾರೆ ಎಂದರು.
ತಮಗೆ ಗೊತ್ತಿರುವ ಹಾಗೆ ಬಿಜೆಪಿ ಪಟ್ಟಿಯಯಲ್ಲಿ ಸದ್ಯ ಶೆಟ್ಟರ್ ಅವರ ಹೆಸರೇ ಮುಂಚೂಣಿಯಲ್ಲಿದೆ. ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.
ಜೆಡಿಎಸ್ 3 ಕ್ಷೇತ್ರ ಕೇಳುವುದು ಸಹಜ: ರಾಜ್ಯದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳನ್ನು ಕೇಳುವುದು ಸಹಜ. ಈ ಬಗ್ಗೆ ಇನ್ನೂ ಯಾವುದೂ ಫೈನಲ್ ಆಗಿಲ್ಲ. ಸದ್ಯದಲ್ಲೇ ಪಕ್ಷದ ವರಿಷ್ಠರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಜೋಶಿ ಹೇಳಿದರು.
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗಿಯಾದ ಜೋಶಿ ಧಾರ್ಮಿಕ ಕಾರ್ಯದಲ್ಲಿ ಜೋಶಿ ಭಾಗಿ: ಶನಿವಾರ ಮಧ್ಯಾಹ್ನ ಕಲಬುರಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಜೋಶಿ, ಸಂಜೆ ವೇಳೆಗೆ ಹುಬ್ಬಳ್ಳಿಯಲ್ಲಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಧಾರ್ಮಿಕ ದಿರಿಸಿನಲ್ಲಿ ಕಾಣಿಸಿಕೊಂಡರು. ಭವಾನಿ ನಗರದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಏರ್ಪಡಿಸಲಾಗಿತ್ತು.
ಇದನ್ನೂ ಓದಿ:7 ಹಂತಗಳಲ್ಲಿ ಲೋಕಸಭಾ ಚುನಾವಣೆ: ಜೂನ್ 4ಕ್ಕೆ ಫಲಿತಾಂಶ