ಕರ್ನಾಟಕ

karnataka

ETV Bharat / state

ಮತ್ತೋರ್ವ ನಕ್ಸಲ್ ಶರಣಾಗತಿ: ಕೋಟೆಹೊಂಡ ರವಿ ಇಂದೇ ಮುಖ್ಯವಾಹಿನಿಗೆ - NAXAL SURRENDER

ಸಿಎಂ ಸಮ್ಮುಖದಲ್ಲಿ ಇತ್ತೀಚೆಗೆ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು. ಈ ಬೆನ್ನಲ್ಲೇ ಇದೀಗ ಮತ್ತೋರ್ವ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ.

ನಕ್ಸಲ್ ಕೋಟೆಹೊಂಡ ರವಿ, Naxal surrender
ಕೋಟೆಹೊಂಡ ರವಿ (ETV Bharat)

By ETV Bharat Karnataka Team

Published : Feb 1, 2025, 9:26 AM IST

ಬೆಂಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯನಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿನ ಅರಣ್ಯ ಐಬಿಯಲ್ಲಿ ಶರಣಾಗಿದ್ದಾರೆ.

ಕೊನೆಯ ಭೂಗತ ನಕ್ಸಲ್ (ಯುಜಿ ನಕ್ಸಲ್) ಎಂದು ಗುರುತಿಸಲ್ಪಟ್ಟಿದ್ದ ಕೋಟೆಹೊಂಡ ರವಿ ಸಮಾಜದ ಮುಖ್ಯವಾಹಿನಿ ಬರಲು ಶರಣಾಗಿದ್ದು, ಶರಣಾಗತಿ ಪ್ರಕ್ರಿಯೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ವರ್ಷಗಳಿಂದ ಭೂಗತರಾಗಿರುವ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಶರಣಾಗಲು ನಿರ್ಧರಿಸಿದ್ದು, ನಾಳೆ ಚಿಕ್ಕಮಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ ಎಂಬ‌ ಮಾಹಿತಿಯನ್ನ ರಾಜ್ಯ ಗುಪ್ತಚರ ಇಲಾಖೆ ಖಚಿತಪಡಿಸಿದೆ.

ಉಡುಪಿ ಜಿಲ್ಲೆಯ ಹೆಬ್ರಿ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಎನ್​​ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ವಿಕ್ರಮ್ ಗೌಡ ಹತ್ಯೆಯಾಗಿತ್ತು. ವಿಕ್ರಂ ಗೌಡನ ತಂಡದಲ್ಲಿದ್ದ ಚಿಕ್ಕಮಗಳೂರು ಭಾಗದ ರವಿ ಕೂಡಾ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ವಿಕ್ರಂ ಗೌಡ ಎನ್​ಕೌಂಟರ್ ಬಳಿಕ ತಂಡದಿಂದ ಬೇರ್ಪಟ್ಟು ಭೂಗತನಾಗಿದ್ದರು.

ಆಪರೇಷನ್ ನಕ್ಸಲ್ ಶರಣಾಗತಿ ಪೂರ್ಣ:ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ನಿರಂತರ ಪ್ರಯತ್ನಗಳನ್ನು ಮಾಡಿದ 22 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪದಕ ಪ್ರಶಸ್ತಿ ಘೋಷಿಸಿದ್ದಾರೆ.

ಇತ್ತೀಚೆಗೆ ಆರು ನಕ್ಸಲರು ಮುಖ್ಯವಾಹಿನಿಗೆ:ನಕ್ಸಲ್ ನಾಯಕ ವಿಕ್ರಂಗೌಡ ಎನ್​ಕೌಂಟರ್ ಬಳಿಕ ಸಂವಿಧಾನದ ವಿರುದ್ಧ ಹಾದಿಯಲ್ಲಿ ತೆರೆಮರೆಯಲ್ಲಿ ಹೋರಾಟ ನಡೆಸುತ್ತಿದ್ದವರು ಮುಖ್ಯವಾಹಿನಿಗೆ ಬಂದರೆ ಸರ್ಕಾರ ಸಹಾನುಭೂತಿಯಿಂದ ನಡೆದುಕೊಳ್ಳಲಿದೆ ಎಂಬ ರಾಜ್ಯ ಸರ್ಕಾರದ ಭರವಸೆಯನ್ನ ನಂಬಿ ಆರು ಮಂದಿ ನಕ್ಸಲೀಯರು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು.

ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಕೆ. ವಸಂತ, ಜಿಶಾ ಹಾಗೂ ಮಾರೆಪ್ಪ ಅರೋಲಿ ಇತ್ತೀಚೆಗೆ ಶರಣಾದವರು. ಈ ಬೆನ್ನಲ್ಲೇ ಇದೀಗ ಮತ್ತಿಬ್ಬರು ಸಮಾಜದ ಮುಖ್ಯವಾಹಿನಿ ಬರುತ್ತಿದ್ದಾರೆ.

ಇದನ್ನೂ ಓದಿ: ಶಸ್ತ್ರಾಸ್ತ್ರ ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಪ್ರವೇಶಿಸಿದ ನಕ್ಸಲರು; ಕೊಟ್ಟ ಭರವಸೆ ಈಡೇರಿಸುವುದಾಗಿ ಸಿಎಂ ಅಭಯ

ಇದನ್ನೂ ಓದಿ: 'ಹುಟ್ಟೂರಿನಲ್ಲಿ ನಾನು ಓದಿದ ಕಿರಿಯ ಪ್ರಾಥಮಿಕ ಶಾಲೆಗೆ ಪುನರ್ವಸತಿ ಪ್ಯಾಕೇಜ್​ನ ಅರ್ಧ ಹಣ ನೀಡಲಿ': ಮುಖ್ಯವಾಹಿನಿಗೆ ಬರಲು ಸಿದ್ಧರಾದ ನಕ್ಸಲರು

ABOUT THE AUTHOR

...view details