ಬೆಂಗಳೂರು: ಟ್ರಕ್ ಮೂಲಕ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಮಾದಕ ಪದಾರ್ಥವನ್ನ ಬೆಂಗಳೂರು ವಲಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 774 ಪೊಟ್ಟಣಗಳಲ್ಲಿ ತುಂಬಿದ್ದ 1591 ಕೆ.ಜಿ ತೂಕದ ಗಾಂಜಾವನ್ನ ಬೀದರ್ ಜಿಲ್ಲೆಯ ಔರಾದ್‌ನ ವನ್ಮಾರಪಲ್ಲಿ ಚೆಕ್ಪೋಸ್ಟ್ ಬಳಿ ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡಿದ್ದ NCB ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಟ್ರಕ್ ವಶಕ್ಕೆ ಪಡೆದಿದ್ದಾರೆ.
ಟ್ರಕ್ ಮೂಲಕ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಗಾಂಜಾ ಜಪ್ತಿ - NCB Seized Ganja
ಟ್ರಕ್ ಮೂಲಕ ಸಾಗಿಸಲಾಗುತ್ತಿದ್ದ 1,591 ಕೆ.ಜಿ ಗಾಂಜಾವನ್ನು ಎನ್ಸಿಬಿ ಅಧಿಕಾರಿಗಳು ಬೀದರ್ನಲ್ಲಿ ವಶಪಡಿಸಿಕೊಂಡಿದ್ದಾರೆ.
ಟ್ರಕ್ ಮೂಲಕ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಗಾಂಜಾ ಜಪ್ತಿ (Etv Bharat)
Published : May 13, 2024, 8:08 PM IST
ಕಳೆದ 2 ತಿಂಗಳ ಅವಧಿಯಲ್ಲಿ ಜಪ್ತಿ ಮಾಡಲಾದ ಮಾದಕ ಪದಾರ್ಥಗಳ ಪೈಕಿ ಎರಡನೇ ಅತಿದೊಡ್ಡ ಕಾರ್ಯಾಚರಣೆ ಎಂದು NCB ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಆಂಧ್ರ - ಒಡಿಶಾ ಗಡಿ ಭಾಗದಲ್ಲಿ 1596.350 ಕೆ.ಜಿ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ:ಗಾಂಜಾ ಮಾರಾಟ ದಂಧೆ: ಮಹಿಳೆ ಬಳಿ 4 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ!