ಕರ್ನಾಟಕ

karnataka

ETV Bharat / state

ಜನ ಮೋದಿ ಪರ ಮತ ಹಾಕುವ ನಂಬಿಕೆ ಇದೆ, 3 ಕ್ಷೇತ್ರಗಳಲ್ಲೂ ಎನ್​ಡಿಎಗೆ ಗೆಲುವು: ಯಡಿಯೂರಪ್ಪ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ಪ್ರಧಾನಿ ಮೋದಿ ಅವರ ಪರ ಮತ ಹಾಕುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬಿ.ಎಸ್​. ಯಡಿಯೂರಪ್ಪ
ಬಿ.ಎಸ್​.ಯಡಿಯೂರಪ್ಪ (ETV Bharat)

By ETV Bharat Karnataka Team

Published : 5 hours ago

ಹುಬ್ಬಳ್ಳಿ:"ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನೂರಕ್ಕೆ ನೂರಷ್ಟು ಗೆದ್ದೇ ಗೆಲ್ಲುತ್ತೇವೆ" ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮೂರು ಕ್ಷೇತ್ರಗಳ ವಾತಾವರಣ ನಮಗೆ ಅನುಕೂಲಕರವಾಗಿದೆ. ಇಡೀ ಜಗತ್ತೇ ಪ್ರಧಾನಿ ಮೋದಿ ಕಡೆ ನೋಡುತ್ತಿದೆ. ಹಾಗಾಗಿ, ಜನರು ಮೋದಿ ಅವರ ಪರ ಮತ ಹಾಕುತ್ತಾರೆ ಎಂಬ ನಂಬಿಕೆ ಇದೆ" ಎಂದರು.

ಮತ್ತೊಂದೆಡೆ, 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಸಂಸದ ಗೋವಿಂದ ಕಾರಜೋಳ ಮಾತನಾಡಿ, "ಯಾರಾದರೂ ಮುಳುಗುವ ಹಡಗಿನಲ್ಲಿ ಕೂರಲು ಸಾಧ್ಯವೇ?. ಸೋಮಶೇಖರ್ ಅತಂತ್ರರಾಗಿದ್ದಾರೆ. ಅವರು ಕಾಂಗ್ರೆಸ್‌ನಲ್ಲೂ ಇಲ್ಲ, ಬಿಜೆಪಿಯಲ್ಲಿ ಇದ್ದರೂ ಇಲ್ಲದಂತೆ.‌ ಹೀಗಾಗಿ ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇಂತಹವರ ಹೇಳಿಕೆಯಿಂದ ಬಿಜೆಪಿಗೆ ಏನೂ ಆಗಲ್ಲ. ನರೇಂದ್ರ ಮೋದಿಯಂತಹ ವಿಶ್ವ ನಾಯಕ ಈ ದೇಶವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಅವರ ಹೇಳಿಕೆಯಿಂದ ಬಿಜೆಪಿಗೆ ಏನೂ ಡ್ಯಾಮೇಜ್ ಆಗೋದಿಲ್ಲ. ಎಸ್.ಟಿ.ಸೋಮಶೇಖರ್​ಗೆ ನೈತಿಕತೆ ಇದ್ದರೆ ಈ ರೀತಿ ಮಾತನಾಡಬಾರದು" ಎಂದು ಹೇಳಿದರು.

ಬಿ.ಎಸ್​.ಯಡಿಯೂರಪ್ಪ, ಬೈರತಿ ಬಸವರಾಜ್ ಪ್ರತಿಕ್ರಿಯೆಗಳು (ETV Bharat)

ಎಸ್​ಟಿಎಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದಾರೆ:ಎಸ್​ಟಿಎಸ್ ಅವರ ಇದೇ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಬೈರತಿ ಬಸವರಾಜ್ ಮಾತನಾಡಿ,​ "ಸುಮ್ಮನೆ ಈ ರೀತಿ ಸುಳ್ಳು ಹೇಳಿಕೆ ನೀಡೋದು ಸರಿಯಲ್ಲ. ಅವರು ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಈ ರೀತಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್​ಗೆ ಯಾವ್ಯಾವ ಶಾಸಕರು ಹೋಗುತ್ತಾರೆ ಎಂದು ಹೆಸರು ಹೇಳಬೇಕಲ್ವಾ?. ಎಸ್.ಟಿ.ಸೋಮಶೇಖರ್ ಶಾಸಕರ ಹೆಸರನ್ನು ಬಹಿರಂಗಪಡಿಸಲಿ" ಎಂದು ಸವಾಲು ಹಾಕಿದರು.

"ರಾಜ್ಯದ ಮೂರು‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ" ಎಂದ ಅವರು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇದೆ ಎಂಬ ವಿಚಾರದ ಪ್ರತಿಕ್ರಿಯಿಸಿ, "ಬಿಜೆಪಿಯಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆಯೇ ಇಲ್ಲ. ಬಸವರಾಜ ಬೊಮ್ಮಾಯಿ ಅವರು ತಮ್ಮ ಮಗನಿಗೆ ಟಿಕೆಟ್ ಬೇಡ ಎಂದಿದ್ದರು. ರಾಷ್ಟ್ರೀಯ ನಾಯಕರೇ ನಿರ್ಧಾರ ಮಾಡಿದಾಗ ಬೇಡ ಎನ್ನಲು ಸಾಧ್ಯವಿಲ್ಲ. ಹಿರಿಯ ನಾಯಕರ ನಿರ್ಧಾರವನ್ನ ತಿರಸ್ಕಾರ ಮಾಡೋದು‌ ಸಮಂಜಸವಲ್ಲ. ಹಿರಿಯ ನಾಯಕರ ನಿರ್ಧಾರದಂತೆ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದಾರೆ" ಎಂದು ತಿಳಿಸಿದರು.

ಇದನ್ನೂ ಓದಿ:ಸಂಡೂರು ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ

ABOUT THE AUTHOR

...view details