ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ: ಪ್ರಲ್ಹಾದ್​ ಜೋಶಿ - PRALHAD JOSHI

ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಬೇಕು ಎಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಆರೋಪಿಸಿದ್ದಾರೆ.

ಪ್ರಲ್ಹಾದ್​ ಜೋಶಿ
ಪ್ರಲ್ಹಾದ್​ ಜೋಶಿ (ETV Bharat)

By ETV Bharat Karnataka Team

Published : Nov 9, 2024, 3:19 PM IST

ಹುಬ್ಬಳ್ಳಿ:"ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ʻಟೋಕನ್ʼ ಮೊರೆ ಹೋಗಿದೆ" ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, "ಉಪ ಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ. ಟೋಕನ್ ತೋರಿಸಿದವರಿಗೆ ಹಣ ಕೊಟ್ಟು ಕಳುಹಿಸುವ ವ್ಯವಸ್ಥೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ" ಎಂದು ದೂರಿದ್ದಾರೆ.

"ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರದ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾಂವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಲ್ಹಾದ್​ ಜೋಶಿ, ಗೋವಿಂದ ಕಾರಜೋಳ ಪ್ರತಿಕ್ರಿಯೆ (ETV Bharat)

ರಾಜ್ಯ ಸರ್ಕಾರದ ವಿರುದ್ಧ ಕಾರಜೋಳ ವಾಗ್ದಾಳಿ:ಮತ್ತೊಂದೆಡೆ, ಸಂಸದ ಗೋವಿಂದ ಕಾರಜೋಳ ಮಾತನಾಡಿ, "ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ವೋ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಬಂದಿದ್ದರು. ಅವರು ಕಾಂಗ್ರೆಸ್​ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ. ಇದನ್ನು ನಾನು ಖಂಡಿಸುತ್ತೇನೆ" ಎಂದು ವಾಗ್ದಾಳಿ ನಡೆಸಿದರು.

"ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್​ ಬಂದಾಗ ಪ್ರೋಟೋಕಾಲ್ ಪಾಲನೆ ಮಾಡದೇ ಅಗೌರವ ತೋರಿದ್ದಾರೆ‌. ಸಿಎಂ
ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಮುಳುಗಿದ್ದು, ರಾಜ್ಯದ ಆರ್ಥಿಕತೆ ದಿವಾಳಿಯಾಗಿದೆ. 25 ಸಾವಿರ ಕೋಟಿ ಎಸ್​ಸಿ, ಎಸ್​ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಈಗ ಉಪಚುನಾವಣೆಗೆ ಅದೇ ಹಣ ಬಳಕೆ ಮಾಡಿಕೊಳ್ಳುತ್ತಿದ್ದಾರೆ‌ ಎಂದು ಸಂಡೂರಿನ ಜನ ಮಾತನಾಡುತ್ತಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್ ಅಕ್ರಮ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು - ಸಚಿವ ದಿನೇಶ್ ಗುಂಡೂರಾವ್

ABOUT THE AUTHOR

...view details