ಕರ್ನಾಟಕ

karnataka

ETV Bharat / state

ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ತೀವ್ರ: ಸಿಐಡಿಯಿಂದ ಮತ್ತಿಬ್ಬರ ವಿಚಾರಣೆ - Neha Hiremath Murder Case - NEHA HIREMATH MURDER CASE

ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತಿಬ್ಬರ ವಿಚಾರಣೆ ನಡೆಸಿದೆ.

ನೇಹಾ ಹಿರೇಮಠ ಕೊಲೆ ಪ್ರಕರಣ
ನೇಹಾ ಹಿರೇಮಠ ಕೊಲೆ ಪ್ರಕರಣ (ETV Bharat)

By ETV Bharat Karnataka Team

Published : May 15, 2024, 1:02 PM IST

Updated : May 15, 2024, 1:08 PM IST

ಹುಬ್ಬಳ್ಳಿ:ದೇಶಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಐಡಿ ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದು, ಎರಡು ದಿನಗಳ ಹಿಂದೆ ಇಲ್ಲಿನ ಹೋಟೆಲ್​ವೊಂದರ ಮಾಲೀಕ ಸೇರಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ನೇಹಾ ಕೊಲೆ ಸಂಚಿನಲ್ಲಿ ನಾಲ್ವರ ಕೈವಾಡವಿದೆ. ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ ಎಂದು ನೇಹಾ ತಂದೆ ನಿರಂಜನ ಹಿರೇಮಠ ಸಾಕಷ್ಟು ಬಾರಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮತ್ತಿಬ್ಬರನ್ನು ವಿಚಾರಣೆಗೆ ಒಳಪಡಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರೋಪಿ ಫಯಾಜ್, ಆತನ ತಂದೆ-ತಾಯಿ, ಸ್ನೇಹಿತರು, ಪರಿಚಯಸ್ಥರು ಸೇರಿದಂತೆ ಹಲವರನ್ನು ಸಿಐಡಿ ಪೊಲೀಸರು ಈಗಾಗಲೇ ವಿಚಾರಣೆಗೊಳಪಡಿಸಿದ್ದು ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದಲ್ಲಿ ದೊರೆತ ಸಾಕ್ಷಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. 90 ದಿನಗಳಲ್ಲಿ ದೋಷಾರೋಪ ಪಟ್ಟಿಯನ್ನು ಸಾಕ್ಷಾಧಾರಗಳೊಂದಿಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂಬ ನಿಯಮವಿದೆ. ಹೀಗಾಗಿ ಆದ್ಯತೆಯ ಮೇರೆಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಶೀಘ್ರವೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದ್ದಾರೆ.

ಏ.18ರಂದು ನೇಹಾ ಕೊಲೆ ನಡೆದಿದ್ದು, ಒಂದು ತಿಂಗಳು ಸಮೀಪಿಸುತ್ತಿದೆ. ಹೀಗಾಗಿ ಅಧಿಕಾರಿಗಳು ಕೂಡ ತ್ವರಿತಗತಿಯಲ್ಲಿ ತನಿಖೆ ಮುಗಿಸಿ ಮಧ್ಯಂತರ ಚಾರ್ಜಾಶೀಟ್ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ:ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ನುಗ್ಗಿ ಹತ್ಯೆ - Girl Stabbed To Death

Last Updated : May 15, 2024, 1:08 PM IST

ABOUT THE AUTHOR

...view details