ಹುಬ್ಬಳ್ಳಿ: ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಕೊಲೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹೇಳಿಕೆಗಳು ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡುವಂತಹ ಹೇಳಿಕೆಗಳಲ್ಲ ಎಂದು ಅವರು ಗಂಭೀರವಾಗಿ ಆರೋಪಿಸಿದರು.
ನನ್ನ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಿ: ನಿರಂಜನಯ್ಯ ಹಿರೇಮಠ - Neha Hiremath Murder Case - NEHA HIREMATH MURDER CASE
ನೇಹಾ ಹಿರೇಮಠ ಕೊಲೆ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ತಂದೆ ನಿರಂಜಯ್ಯ ಹಿರೇಮಠ ಆಗ್ರಹಿಸಿದ್ದಾರೆ.
Published : Apr 20, 2024, 11:47 AM IST
ಈಗಾಗಲೇ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಮಹೇಶ ಟೆಂಗಿನಕಾಯಿ ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿ ನಿಮ್ಮ ಜೊತೆಗೆ ಇದ್ದೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ಅವರು ರಾಜಕೀಯ ವಿಷಯವನ್ನು ಇಟ್ಟುಕೊಂಡು ಬಂದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಈ ವಿಚಾರವಾಗಿ ನಮ್ಮ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಫೋನ್ ಮಾಡಿ ಯಾವುದೇ ಕಾರಣಕ್ಕೂ ಭಯ ಪಡಬೇಡಿ, ನಿಮ್ಮ ಜೊತೆಗೆ ಇದ್ದೇವೆ ಪಕ್ಷದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಏನ್ ಸತ್ಯ ಇದೆ ಅದನ್ನೇ ಹೇಳು, ಯಾರೇ ಏನೆ ಅಂದರೂ ಅವರಿಗೆ ಕೌಂಟರ್ ಕೊಡುವಂತಹ ಕೆಲಸ ಮಾಡು ಎಂದಿದ್ದಾರೆ ಎಂದರು.
ಇದನ್ನೂ ಓದಿ:ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್ನಲ್ಲಿ ಯುವತಿಯ ಭೀಕರ ಕೊಲೆ; ಯುವಕನ ಬಂಧನ - Corporator Daughter Murder