ಕರ್ನಾಟಕ

karnataka

ETV Bharat / state

ನೂತನ ಕ್ರಿಮಿನಲ್ ಕಾನೂನಿನನ್ವಯ ಮೊದಲ ದಿನವೇ ಬೆಂಗಳೂರಿನಲ್ಲಿ ದಾಖಲಾದ ಪ್ರಕರಣಗಳೆಷ್ಟು ಗೊತ್ತಾ? - New Criminal law cases - NEW CRIMINAL LAW CASES

ದೇಶದಲ್ಲಿ ಜಾರಿ ಮಾಡಿರುವ ನೂತನ ಕಾನೂನಿನಡಿ ಮೊದಲನೇ ದಿನ ರಾಜಧಾನಿ ಬೆಂಗಳೂರಿನಲ್ಲಿ 38 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಕಮಿಷನರ್​ ಮಾಹಿತಿ ನೀಡಿದರು. ​

ಬೆಂಗಳೂರು
ಬೆಂಗಳೂರು (ETV Bharat)

By ETV Bharat Karnataka Team

Published : Jul 2, 2024, 12:22 PM IST

Updated : Jul 2, 2024, 12:53 PM IST

ಬೆಂಗಳೂರು: ದೇಶಾದ್ಯಂತ ಜಾರಿಯಾಗಿರುವ ನೂತನ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮೊದಲನೇ ದಿನ (ಜುಲೈ 1) ಬೆಂಗಳೂರು ನಗರದಲ್ಲಿ ಒಟ್ಟು 38 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದರು.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂತನ ಕಾನೂನಿನನ್ವಯ ಬೆಂಗಳೂರು ನಗರದಲ್ಲಿ ಮೊದಲನೇ ದಿನ ಸುಗಮ ಹಾಗೂ ಸುಸೂತ್ರವಾಗಿ ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗಿದ್ದು, ಯಾವುದೇ ರೀತಿಯ ಕಾನೂನಿನ ಅಡಚಣೆಯಾಗಲಿ, ತಾಂತ್ರಿಕ ಸಮಸ್ಯೆಯಾಗಲಿ ಆಗಿಲ್ಲ ಎಂದು ಅವರು ತಿಳಿಸಿದರು.

ಸೋಮವಾರ ಬೆಂಗಳೂರಿನಲ್ಲಿ ಒಟ್ಟು 38 ಪ್ರಕರಣಗಳು ದಾಖಲಾಗಿವೆ. ಆ ಪೈಕಿ ಭಾರತೀಯ ನ್ಯಾಯ ಸಂಹಿತೆಯಡಿ 31, ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ 7 ಪ್ರಕರಣಗಳು ದಾಖಲಾಗಿವೆ ಎಂದು ಆಯುಕ್ತರು ವಿವರಿಸಿದರು.

ಜುಲೈ 1ರಿಂದ ದೇಶಾದ್ಯಂತ ಅನುಷ್ಠಾನಕ್ಕೆ ಬಂದಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023ರ ಕುರಿತು ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ 7 ವಲಯಗಳು, 6 ಕಮೀಷನರೇಟ್ ಘಟಕಗಳು ಹಾಗೂ 1063 ಪೊಲೀಸ್ ಠಾಣೆಗಳು ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿತ್ತು.

ಇದನ್ನೂ ಓದಿ:ಹೊಸ ಕ್ರಿಮಿನಲ್​ ಕಾನೂನಗಳಡಿ ಯುಪಿಯಲ್ಲಿ ಮೊದಲ ಪ್ರಕರಣ ದಾಖಲು - New Criminal Law

Last Updated : Jul 2, 2024, 12:53 PM IST

ABOUT THE AUTHOR

...view details