ಬೆಂಗಳೂರು:ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರ ಪೂರೈಕೆ ಮಾಡುವ ಕುರಿತಂತೆ ಕರೆಯಲಾಗುವ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್ಗಳಲ್ಲಿ ಮುದ್ದೆೆ, ಸಾರು ದೊರೆಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಇಂದಿರಾ ಕ್ಯಾಂಟೀನ್ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆೆ ಕೇವಲ ರೈಸ್ ಬಾತ್, ಅನ್ನ ಸಾಂಬಾರ್, ಮೊಸರನ್ನವನ್ನು ನೀಡಲಾಗುತ್ತಿತ್ತು. ಆದರೆ, ಹಿರಿಯ ನಾಗರಿಕರು ಹಾಗೂ ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಇತರರು ರೈಸ್ ಪದಾರ್ಥದ ಊಟ ಮಾತ್ರ ಬೇಡ ಮುದ್ದೆೆ ಚಪಾತಿ ನೀಡುವಂತೆ ಮನವಿ ಸಲ್ಲಿಸಿದ ಹಿನ್ನೆೆಲೆಯಲ್ಲಿ ಊಟದ ಮೆನು ಬದಲಾವಣೆ ಮಾಡಿ ಮುದ್ದೆೆ, ಸಾರು, ಚಪಾತಿ ನೀಡಲು ರಾಜ್ಯ ಸರ್ಕಾರ ಹಾಗೂ ಪಾಲಿಕೆ ಮುಂದಾಗಿತ್ತು.
ಆದರೆ, ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಮುದ್ದೆ, ಸಾರು ದೊರೆಯಲಿದೆ ಎನ್ನಲಾಗುತ್ತಿದೆ. ಕಳೆದ ಆಗಸ್ಟ್ನಲ್ಲಿ ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನೆೆಲೆಯಲ್ಲಿ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್‌ನಲ್ಲಿ ಟೆಂಡರ್ ಆಹ್ವಾನಿಸುವಂತೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಎಂಟು ವಲಯಗಳಿಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸುವುದಕ್ಕೆೆ ನಿರ್ಧರಿಸಿ ನಾಲ್ಕು ಪ್ಯಾಕೇಜ್‌ಗಳಲ್ಲಿ ಟೆಂಡರ್ ಆಹ್ವಾನಿಸಿದೆ.