ಕರ್ನಾಟಕ

karnataka

ETV Bharat / state

ವಿಜಯಪುರ: ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ದಂಪತಿ ಆತ್ಮಹತ್ಯೆ - Couple Commits Suicide - COUPLE COMMITS SUICIDE

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

LOVE MARRIAGE  COUPLE COMMITTED SUICIDE  VIJAYAPURA
ಆತ್ಮಹತ್ಯೆಗೆ ಶರಣಾದ ನವದಂಪತಿ (ETV Bharat)

By ETV Bharat Karnataka Team

Published : May 15, 2024, 2:32 PM IST

ವಿಜಯಪುರ:ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಮನೋಜಕುಮಾರ ಪೋಳ (30) ಮತ್ತು ರಾಖಿ (23) ಎಂದು ಗುರುತಿಸಲಾಗಿದೆ. ಇವರು ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ನಿನ್ನೆ ತಡರಾತ್ರಿ ಊಟ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮನೋಜಕುಮಾರ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಮನೋಜಕುಮಾರ ತಾಯಿ ಭಾರತಿ ಅವರು ತಮ್ಮ ಮಗಳ ಊರಿಗೆ ಹೋಗಿದ್ದರು.​ ಇಂದು‌ ಬೆಳಗ್ಗೆ ವಾಪಸ್ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಕುಸಿದು ಬಿದ್ದಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ನುಗ್ಗಿ ಹತ್ಯೆ - Girl Stabbed To Death

ABOUT THE AUTHOR

...view details