ಕರ್ನಾಟಕ

karnataka

ETV Bharat / state

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ - NIKHIL KUMARASWAMY

ಜೆಡಿಎಸ್‌ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

nikhil-kumaraswamy-meets-amit-shah-in-delhi
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Dec 9, 2024, 10:34 PM IST

ಬೆಂಗಳೂರು/ನವದೆಹಲಿ:ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯ ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಚನ್ನಪಟ್ಟಣ ಫಲಿತಾಂಶದ ಕುರಿತ ಮಾಹಿತಿ ಹಂಚಿಕೊಂಡೆ. ಅವರೂ ಕೂಡ ನನಗೆ ಧೈರ್ಯ ತುಂಬಿ ಉತ್ತಮವಾಗಿ ಕೆಲಸ ಮಾಡುವಂತೆ ಹುರಿದುಂಬಿಸಿದರು ಎಂದರು.

ಮುಂದುವರೆದು ಮಾತನಾಡಿದ ಅವರು, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಅಮಿತ್ ಶಾ ಅವರಲ್ಲಿ ಚರ್ಚೆ ನಡೆಸಲಾಯಿತು. ಮೈತ್ರಿಕೂಟಗಳ ಎರಡೂ ಪಕ್ಷಗಳು ಒಟ್ಟಾಗಿ ಹೋಗಬೇಕು. ತಳಮಟ್ಟದಲ್ಲಿ ಎನ್​ಡಿಎ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರು ನನಗೆ ಮಾರ್ಗದರ್ಶನ ಮಾಡಿದರು ಎಂದು ನಿಖಿಲ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೂ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆ. ಎಲ್ಲಾ ನಾಯಕರು ಸಂಘಟನೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಸಲಹೆ ಮಾಡಿದರು ಎಂದರು.

ಅಮಿತ್ ಶಾ ಭೇಟಿಯಾದ ನಿಖಿಲ್ ಕುಮಾರಸ್ವಾಮಿ (ETV Bharat)

ಕರ್ನಾಟಕ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಜನರು ಸಾಕಷ್ಟು ತೊಂದರೆಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ನಾಯಕರು ಸೂಚನೆ ನೀಡಿದ್ದಾರೆ ಎಂದು ನಿಖಿಲ್ ಹೇಳಿದರು.

ದೇವೇಗೌಡರನ್ನು ಸಿ.ಪಿ.ಯೋಗೇಶ್ವರ್ ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ನಿಖಿಲ್, ಅರವತ್ತು ವರ್ಷ ಜನಪರವಾಗಿ ಕೆಲಸ ಮಾಡಿರುವ ದೇವೇಗೌಡರ ಬಗ್ಗೆ ಇಂಥ ಟೀಕೆ ಮಾಡುವುದು ಸರಿಯಲ್ಲ. ಅವರು ಶಾಸಕ ಸ್ಥಾನಕ್ಕೆ ಶೋಭೆ ತರುವ ಮಾತು ಆಡಬೇಕು ಎಂದರು.

ನಾನು ಸೋಲನ್ನು ತಲೆಬಾಗಿ ಸ್ವೀಕರಿಸಿದ್ದೇನೆ. ದೇವೇಗೌಡರು ನೆಲ, ಜಲದ ವಿಚಾರದಲ್ಲಿ ನಿರಂತರ ಹೋರಾಟ ನಡೆಸಿದ್ದಾರೆ. ಈಗಲೂ ಯುವ ಸಂಸದರು ನಾಚುವಂತೆ ಅವರು ಶಿಸ್ತುಬದ್ದವಾಗಿ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜನರ ಸಲುವಾಗಿ ಅವರು ರಾಜಕೀಯದಲ್ಲಿ ಮುಂದುವರಿದಿದ್ದಾರೆ, ಮುಂದೂ ಮುಂದುವರೆಯುತ್ತಾರೆ ಎಂದರು.

ದೇವೇಗೌಡರಿಗೆ ಮೋದಿಯವರೇ ಸ್ವತಃ ಫೋನ್ ಮಾಡಿ ರಾಜಕೀಯ ತೊರೆಯದಂತೆ ಹೇಳಿದ್ದರು. ರಾಜ್ಯಸಭೆ ತೊರೆಯದಂತೆ ಪ್ರಧಾನಿ ಮೋದಿಯವರೇ ಹೇಳಿ, ದೇಶಕ್ಕೆ ನಿಮ್ಮ ಮಾರ್ಗದರ್ಶನ ಬೇಕು ಎಂದು ಕೋರಿದ್ದರು. ಅವರ ಮಾತನ್ನು ಮೀರಲಾಗದೇ ದೇವೇಗೌಡರು ರಾಜಕಾರಣದಲ್ಲಿ ಇದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಸೋತಿದ್ದೇನೆ ಅಷ್ಟೇ, ಸತ್ತಿಲ್ಲ! ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ

ABOUT THE AUTHOR

...view details