ಕರ್ನಾಟಕ

karnataka

ETV Bharat / state

ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದ್ದೇನೆ: ನಿಖಿಲ್ ಕುಮಾರಸ್ವಾಮಿ - NIKHIL KUMARASWAMY

ಚನ್ನಪಟ್ಟಣ ಉಪಚುನಾವಣೆ ರಂಗೇರಿದೆ. ಇಂದು ಮೊದಲ ಬಾರಿಗೆ ಮಾಕಳಿ ಗ್ರಾಮದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಪ್ರಚಾರ ನಡೆಸಿದರು.

ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದ್ದೇನೆಂದ ನಿಖಿಲ್​ ಕುಮಾರಸ್ವಾಮಿ.
ನಿಖಿಲ್​ ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Oct 27, 2024, 2:08 PM IST

ರಾಮನಗರ:"ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಇದೇ ಪ್ರಥಮ ಬಾರಿಗೆ ಇಂದು ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜೊತೆ ಮತ ಪ್ರಚಾರ ಮಾಡುತ್ತಿದ್ದೇನೆ" ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

"ಕ್ಷೇತ್ರದ 15ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಕುಮಾರಸ್ವಾಮಿಯವರು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ. ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳುವಳಿ ವೇಳೆ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದರು" ಎಂದರು.

ನಿಖಿಲ್​ ಕುಮಾರಸ್ವಾಮಿ ಹೇಳಿಕೆ (ETV Bharat)

"ಮಂಡ್ಯ ಹಾಗೂ ರಾಮನಗರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಒಬ್ಬ ಯುವಕನಾಗಿ, ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಅದಕ್ಕೆ ಕ್ಷೇತ್ರದ ಜನ ಅವಕಾಶ ಮಾಡಿಕೊಡಿ" ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ:ಚನ್ನಪಟ್ಟಣ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ: ಬಿ.ವೈ.‌ ವಿಜಯೇಂದ್ರ

ಚನ್ನಪಟ್ಟಣ ಉಪಕದನ ಕುತೂಹಲ: 2 ದಶಕಗಳಿಂದ ಚನ್ನಪಟ್ಟಣ ಚುನಾವಣಾ ರಾಜಕೀಯದಲ್ಲಿ ಯಾರ ಪ್ರಾಬಲ್ಯ ಹೇಗಿದೆ ನೋಡಿ

ABOUT THE AUTHOR

...view details