ಮಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಸೋಂಕಿನಿಂದ ಓರ್ವ ಬಾಲಕ ಮೃತಪಟ್ಟಿದ್ದಾನೆ. ಆದರೆ ದ.ಕ. ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ಕಂಡು ಬಂದಿಲ್ಲ. ಆತಂಕ ಬೇಡ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ ಹೇಳಿದ್ದಾರೆ.
'ದ.ಕ.ಜಿಲ್ಲೆಯಲ್ಲಿ ನಿಫಾ ವೈರಸ್ಗೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ರಾಜ್ಯದಿಂದಲೂ ಯಾವುದೇ ಮಾರ್ಗಸೂಚಿಗಳು ಬಂದಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಕೇರಳದಿಂದ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಬರುವವರ ಮೇಲೆ ನಿಗಾ ಇರಿಸಿಕೊಳ್ಳಲು ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಈಗಾಗಲೇ ಸುತ್ತೋಲೆ ಕಳುಹಿಸಿದ್ದೇವೆ. ಯಾರೂ ಅನಗತ್ಯ ಗೊಂದಲ, ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ' ಎಂದು ಡಾ. ಹೆಚ್.ಆರ್. ತಿಮ್ಮಯ್ಯ ಹೇಳಿದರು.