ಕರ್ನಾಟಕ

karnataka

ETV Bharat / state

ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯರಿಂದ ಕರ್ತವ್ಯಲೋಪ ಆಗಿಲ್ಲವೆಂದ ಸಚಿವ ದಿನೇಶ್ ಗುಂಡೂರಾವ್; ಇಂದು ಸಿಎಂ ಸಭೆ - MINISTER DINESH GUNDURAO

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ರಚಿಸಲಾದ ತಜ್ಞ ವೈದ್ಯರ ತಂಡದ ವರದಿ ನೀಡಿದ್ದು, ಬಳ್ಳಾರಿಯ ಜಿಲ್ಲಾಸ್ಪತ್ರೆಯ ವೈದ್ಯರಿಂದ ಕರ್ತವ್ಯಲೋಪವಾಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್
ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Nov 29, 2024, 10:28 PM IST

Updated : Nov 29, 2024, 10:51 PM IST

ಬೆಂಗಳೂರು: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಲು ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಇಂದು ಸಂಜೆ 4:30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಯಲ್ಲಿ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ತಜ್ಞ ವೈದ್ಯರು ಈ ಬಗ್ಗೆ ಸಿಎಂಗೆ ವರದಿ ನೀಡಲಿದ್ದಾರೆ. ಈ ವರದಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ನಡುವೆ ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ರಚಿಸಲಾದ ತಜ್ಞ ವೈದ್ಯರ ತಂಡ ತಾಯಂದಿರ ಮರಣದ ವರದಿ ನೀಡಿದೆ. ವರದಿಯನ್ನು ಪರಿಶೀಲಿಸಿದಾಗ ಬಳ್ಳಾರಿಯ ಜಿಲ್ಲಾಸ್ಪತ್ರೆಯ ವೈದ್ಯರ ತಂಡದಿಂದ ಯಾವುದೇ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದ ಸುಮ್ಮನಹಳ್ಳಿಯ ಡಾ. ಬಾಬು ಜಗಜೀವನ್ ರಾಮ್ ಆಡಿಟೋರಿಯಂನಲ್ಲಿ ಶುಕ್ರವಾರ ನಡೆದ ಇಂಡಿಯನ್ ಡೆಂಟಲ್ ಅಸೋಸಿಯೇಷ್​ನ 15ನೇ ಸಿಲ್ವರ್ ಜೂಬ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಣಂತಿಯರ ಸಾವಿನ ಕುರಿತಾದ ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. 2024ರ ನವೆಂಬರ್ 9 ರಿಂದ 11ರ ವರೆಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ತಾಯಂದಿರ ಮರಣ ಪ್ರಮಾಣ ಹಠಾತ್​​ ಹೆಚ್ಚಳದ ಕುರಿತು ವರದಿಯಾಗಿತ್ತು ಎಂದರು.

ನವೆಂಬರ್ 9, 10 ಮತ್ತು 11 ರಂದು ಆಪರೇಷನ್ ಥಿಯೇಟರ್‌ನಲ್ಲಿ ನಡೆಸಿದ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ನಂತರ ಸಾವುಗಳು ಸಂಭವಿಸಿವೆ ಎಂದು ಹೇಳಲಾಗಿತ್ತು. ಈ 3 ದಿನಗಳಲ್ಲಿ ನಡೆಸಿದ 34 ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಪೈಕಿ 7 ಪ್ರಕರಣಗಳಲ್ಲಿ ಮಾತ್ರ ಲೋಪದೋಷ ಕಂಡು ಬಂದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮೂತ್ರಪಿಂಡ ಗಾಯದಂತಹ ಸಮಸ್ಯೆಗಳು 7 ಪ್ರಕರಣಗಳಲ್ಲಿ ಕಂಡು ಬಂದಿದೆ. ಅದರಲ್ಲಿ ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ. ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬ ರೋಗಿಯು ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಈಗ ಬಂದಿರುವ ವರದಿಯ ಪ್ರಕಾರವೂ ರೋಗಿಗಳ ಆರೈಕೆ, ಸಿಸೇರಿಯನ್ ವಿಭಾಗದ ಕಾರ್ಯವಿಧಾನ ಮತ್ತು ನಿರ್ವಹಣೆಗೆ ಅಗತ್ಯವಾದ ಮಾರ್ಗಸೂಚಿಗಳು ತೃಪ್ತಿಕಾರವಾಗಿವೆ. 4 ರೋಗಿಗಳನ್ನು ಸಹ ಗುಣಪಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ. ಬಿಜೆಪಿಯವರ ಆರೋಪದ ಕುರಿತು ಕೂಡ ತನಿಖೆ ನಡೆಯುತ್ತಿದೆ. ಔಷಧಗಳಲ್ಲಿ ಸಮಸ್ಯೆ ಆಗಿದ್ದರೆ ಪರಿಶೀಲಿಸಲು ಸೂಚಿಸಲಾಗಿದೆ. ತಪ್ಪಿತಸ್ಥ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಕೇಂದ್ರದ ಕ್ರಮಗಳು ವೀಕ್ ಇವೆ. ಈ ಕುರಿತು ಎರಡನೇ ವರದಿ ಬರಲಿದೆ. ಅದರ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಗುಂಡೂರಾವ್​ ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಶಾಲೆಯಲ್ಲಿ ಚಿಕ್ಕಿ ತಿಂದು ಇಬ್ಬರು ಅಸ್ವಸ್ಥ ; 44 ವಿದ್ಯಾರ್ಥಿಗಳು ಚಿಕಿತ್ಸೆ ಬಳಿಕ ಡಿಸ್ಚಾರ್ಜ್​

Last Updated : Nov 29, 2024, 10:51 PM IST

ABOUT THE AUTHOR

...view details