ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ - ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

By ETV Bharat Karnataka Team

Published : Jan 21, 2024, 6:00 PM IST

Updated : Jan 21, 2024, 7:34 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು: ರಾಜ್ಯದಲ್ಲಿ ಸೋಮವಾರ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಾಸೋಹದ ದಿನದ ಬಗ್ಗೆ ಮಾಹಿತಿ ಇಲ್ಲ. ಐ ಡೋಂಟ್ ನೋ ಎಂದರು. ನಾಳೆ ನಾನು ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮ ದೇವಸ್ಥಾನ ಉದ್ಘಾಟನೆಗೆ ಹೋಗುತ್ತಿದ್ದೇನೆ.‌ ಆಹ್ವಾನ ಕೊಟ್ಟಿದ್ದಾರೆ ಹೋಗುತ್ತಿದ್ದೇನೆ ಎಂದರು.

ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ಮಾಹಿತಿಯಿಲ್ಲ. ನಾಳೆ ರಜೆ ನೀಡುವುದಿಲ್ಲ ಎಂದು ಎಂದು ಸಿಎಂ ಸ್ಪಷ್ಟಪಡಿಸಿದರು. ತಮಿಳುನಾಡು ಸರ್ಕಾರದಿಂದ ರಾಮಮಂದಿರ ಉದ್ಘಾಟನೆ ಲೈವ್ ಬ್ಯಾನ್ ವಿಚಾರವಾಗಿ ಪ್ರತಿಕ್ರಿಯೆ ನೀಡಲ್ಲ. ರೇಸ್ ಕೋರ್ಸ್ ಕುಣಿಗಲ್​ಗೆ ಶಿಫ್ಟ್ ಮಾಡಲು ಸಲಹೆ ನೀಡಿದ್ದೇನೆ.‌ ಕೊಬ್ಬರಿ‌ಗೆ 1500ಕ್ಕೂ ಹೆಚ್ಚು ಹಣ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಪೊಲೀಸರಿಗೆ ಸೂಚನೆ : ಇದಕ್ಕೂ ಮುಂಚಿತವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ನಿನ್ನೆ ಪೋಸ್ಟ್ ಮಾಡಿದ್ದ ಸಿಎಂ, ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಸೋಮವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

''ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡಿ ಅಮಾಯಕರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೊಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕ ಪ್ರಸಂಗತನ ಮಾಡಬಾರದು.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂಥವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು-ಧರ್ಮ-ಪೂಜೆ-ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು-ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ'' ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಾಣ ಪ್ರತಿಷ್ಠಾಪನಾ ದಿನ ರಾಜ್ಯದಲ್ಲಿ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ: ಸಚಿವ ಪರಮೇಶ್ವರ್

Last Updated : Jan 21, 2024, 7:34 PM IST

ABOUT THE AUTHOR

...view details