ಕರ್ನಾಟಕ

karnataka

ETV Bharat / state

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ರಾಜ್ಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ರಮ್ಯಾ ಪ್ರತಿಕ್ರಿಯೆ - Actress Ramya statement

''ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ'' ಎಂದು ನಟಿ ರಮ್ಯಾ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Actress Ramya  BS Yediyurappa  Prajwal Revanna  Actor Darshan Thoogudeepa
ನಟಿ ರಮ್ಯಾ (Social media X)

By ETV Bharat Karnataka Team

Published : Jun 22, 2024, 2:32 PM IST

ಬೆಂಗಳೂರು:ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರಿ ಸದ್ದು ಮಾಡುತ್ತಿವೆ. ಅದರಲ್ಲಿ ನಟ ದರ್ಶನ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮತ್ತಿತರ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಧ್ವನಿ ಎತ್ತಿದ್ದಾರೆ. ಈಗ ಮತ್ತೊಮ್ಮೆ ಈ ಕುರಿತು ಮೋಹಕ ತಾರೆ ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ.

ಸದ್ಯ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಕಾನೂನು ಉಲ್ಲಂಘಿಸುವ ಹಣವಂತರು ಹಾಗೂ ಪ್ರಭಾವಶಾಲಿಗಳು ಸುದ್ದಿಯಲ್ಲಿದ್ದಾರೆ. ಅವರ ಮಾಡು‌ವ ಘನಘೋರ ತಪ್ಪಿನಿಂದ ರಾಜ್ಯದ ಜನತೆ ಆಘಾತಕ್ಕೆ ಒಳಗಾಗಿದ್ದಾರೆ. ಈ ಅಪರಾಧಗಳನ್ನು ಹೊರತಂದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸಾಫ್. ವಿಚಾರಣೆಯನ್ನು ಚುರುಕುಗೊಳಿಸಿ, ಪ್ರಕರಣಗಳ ಸರಿಯಾಗಿ ತನಿಖೆ ಮಾಡಿದ ನ್ಯಾಯಾಲಯದ ಮುಂದೆ ಸಾಕ್ಷಿಗಳನ್ನು ನೀಡಿದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ಕೆಲವೊಮ್ಮೆ ನ್ಯಾಯ ಸಿಗದಿದ್ದರೆ ಏನು ಸಂದೇಶವನ್ನು ನೀಡಿದಂತಾಗುತ್ತದೆ ಎಂದು ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಹೆಸರನ್ನು ಟ್ಯಾಗ್ ಮಾಡಿದ್ದಾರೆ. ಇನ್ನು ರಮ್ಯಾ ಪೋಸ್ಟ್ ಮಾಡಿರೋದು ಸಖತ್ ವೈರಲ್ ಆಗುತ್ತಿದೆ.

ಇನ್ನು ರೇಣುಕಾಸ್ವಾಮಿ ಹತ್ಯೆ ಆರೋಪ ಹೊತ್ತಿರುವ ದರ್ಶನ್ ಮತ್ತು ಗ್ಯಾಂಗ್ ಬಗ್ಗೆ ನಟಿ ರಮ್ಯಾ ಅಸಮಾಧಾನ ವ್ಯಕ್ತಪಡಿಸುತ್ತಾ ಬಂದಿದ್ದಾರೆ‌. ಈ ಪ್ರಕರಣದ ಬಗ್ಗೆ ಈ ಹಿಂದೆ ಸುದೀರ್ಘವಾಗಿ ಬರೆದುಕೊಂಡಿದ್ದರು. ಬ್ಲಾಕ್ ಎನ್ನುವ ಆಯ್ಕೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಕೊಟ್ಟಿರುತ್ತಾರೆ. ಟ್ರೋಲ್‌ ಮಾಡುವವರು ಹೆಚ್ಚಾದಲ್ಲಿ ನೀವು ದೂರು ನೀಡಬಹುದು. ಟ್ರೋಲಿಗರು ನಿರಂತರವಾಗಿ ಕೆಟ್ಟ ಭಾಷೆಯಲ್ಲಿ ನನ್ನನ್ನು ಟ್ರೋಲ್ ಮಾಡಿದ್ದರು. ಕೇವಲ ನನ್ನನ್ನಷ್ಟೇ ಅಲ್ಲ, ಬೇರೆ ಕಲಾವಿದರನ್ನು ಟ್ರೋಲ್ ಮಾಡಿದ್ದಾರೆ. ಅಷ್ಟೇ ಯಾಕೆ ಟ್ರೋಲಿಗರು ಹೆಂಡತಿ, ಮಕ್ಕಳನ್ನೂ ಸಹ ಬಿಟ್ಟಿಲ್ಲ. ಎಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ ಅಂತಾ ರಮ್ಯಾ ಹೇಳಿದ್ದಾರೆ.

ಮೋಹಕ ತಾರೆ ರಮ್ಯಾ ಮಾಡಿರುವ ಪೋಸ್ಟ್ (Social media X)

ಇನ್ನು ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ. ನೀವು ಹೋಗಿ ಜನರಿಗೆ ಹೊಡೆದು ಅವನನ್ನು ಸಾಯಿಸುವುದಕ್ಕೆ ಆಗುವುದಿಲ್ಲ. ನ್ಯಾಯ ನಿಮಗೆ ಸಿಗುತ್ತೋ ಇಲ್ಲವೋ ಅನ್ನೋದು ನೀವು ಒಂದು ಚಿಕ್ಕ ದೂರನ್ನು ಕೊಟ್ಟರೂ ಸಾಕು ತಿಳಿಯುತ್ತೆ. ಇದರ ಜೊತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ಗೌರವ ಸೂಚಿಸುತ್ತೇನೆ. ಅವರದ್ದು ನಿಸ್ವಾರ್ಥದ ಕೆಲಸ. ಅವರು ತಮ್ಮ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ. ಅವರು ಯಾವುದೇ ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯದೇ ಕೆಲಸ ಮಾಡುತ್ತಾರೆ. ಹಾಗೇ ಜನರು ಕಾನೂನಿನ ಮೇಲೆ ಇಟ್ಟಿರುವ ನಂಬಿಕೆ ಉಳಿಸುತ್ತಾರೆ ಎನ್ನುವ ವಿಶ್ವಾಸವಿದೆ ಅಂತಾ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಸೂರಜ್ ರೇವಣ್ಣ ವಿಚಾರವಾಗಿ ಅಧಿಕೃತ ದೂರು ದಾಖಲಾಗಿಲ್ಲ, ದೂರು ಬಂದರೆ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ - SURAJ REVANNA ISSUE

ABOUT THE AUTHOR

...view details