ಕರ್ನಾಟಕ

karnataka

By ETV Bharat Karnataka Team

Published : Jun 3, 2024, 3:32 PM IST

Updated : Jun 3, 2024, 4:19 PM IST

ETV Bharat / state

ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah

ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಕೇಳಿಲ್ಲ, ಪ್ರಾಥಮಿಕ ವರದಿ ಪಡೆದು ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿ, ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ರಾಜೀನಾಮೆಗೆ ಜೂನ್ 6ವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಪ್ರಾಥಮಿಕ ವರದಿ ಪಡೆದು ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಉತ್ತಮ ಮಳೆ:ಬೆಂಗಳೂರಿನಲ್ಲಿ ಒಳ್ಳೆಯ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗಿವೆ. ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಎಕ್ಸಿಟ್ ಪೋಲ್ ಸಂಪೂರ್ಣ ತಳ್ಳಿ ಹಾಕುತ್ತೇವೆ:ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಮಾತನಾಡಿ, ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ. ಈ ಸಮೀಕ್ಷೆಯನ್ನು ಸಂಪೂರ್ಣವಾಗಿ ತಳ್ಳಿಹಾಕುತ್ತೇವೆ ಎಂದರು.

ಇದನ್ನೂ ಓದಿ:ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರ್ಕಾರದ ವಿರುದ್ಧ ಜೋಶಿ, ಶೆಟ್ಟರ್ ವಾಗ್ದಾಳಿ - Valmiki Corporation scam case

Last Updated : Jun 3, 2024, 4:19 PM IST

ABOUT THE AUTHOR

...view details