ಕರ್ನಾಟಕ

karnataka

ETV Bharat / state

ದರ್ಶನ್‌ ಗನ್ ಲೈಸೆನ್ಸ್ ರದ್ದುಗೊಳಿಸಲು ಮುಂದಾದ ಪೊಲೀಸರು; ಸ್ಪಷ್ಟನೆ ಕೋರಿ ನೋಟಿಸ್ ಜಾರಿ - NOTICE TO DARSHAN

ನೋಟಿಸ್​ಗೆ ಉತ್ತರ ನೀಡಿದ ಬಳಿಕ ಗನ್​ ಲೈಸೆನ್ಸ್​ ರದ್ದುಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Actor Darshan
ನಟ ದರ್ಶನ್​ (ETV Bharat)

By ETV Bharat Karnataka Team

Published : Jan 12, 2025, 2:48 PM IST

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ರದ್ದುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಗನ್ ಲೈಸೆನ್ಸ್ ಬಗ್ಗೆ ಒಂದು ವಾರದಲ್ಲಿ ಸ್ಪಷ್ಟನೆ ನೀಡುವಂತೆ ದರ್ಶನ್ ಅವರಿಗೆ ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ ನೋಟಿಸ್ ನೀಡಿದ್ದಾರೆ.

"ಹತ್ಯೆ ಪ್ರಕರಣದ ಆರೋಪಿಯಾಗಿರುವ ನೀವು ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಲೈಸೆನ್ಸ್ ಹೊಂದಿರುವ ಗನ್​ ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿವೆ. ನಿಮ್ಮ ಗನ್ ಲೈಸೆನ್ಸ್ ರದ್ದು ಮಾಡಬೇಕಿದೆ. ಆದ್ದರಿಂದ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡಿ" ಎಂದು ನೋಟಿಸ್ ನೀಡಲಾಗಿದೆ.

ನೋಟಿಸ್‌ಗೆ ಉತ್ತರ ನೀಡಿದ ಬಳಿಕ ಗನ್ ಲೈಸೆನ್ಸ್ ರದ್ದುಪಡಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ತನಿಖೆ ವೇಳೆ ಪೊಲೀಸರು ಜಪ್ತಿ ಮಾಡಿದ್ದ ಹಣ ಮರಳಿಸುವಂತೆ ಸೂಚಿಸಿ : ನ್ಯಾಯಾಲಯಕ್ಕೆ ದರ್ಶನ್ ಮನವಿ

ABOUT THE AUTHOR

...view details