ಕರ್ನಾಟಕ

karnataka

ಅಜೀಂ ಪ್ರೇಮ್​​ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ 6ದಿನ ಪೌಷ್ಠಿಕ ಆಹಾರ - CM To Visit Ankola

By ETV Bharat Karnataka Team

Published : Jul 20, 2024, 2:08 PM IST

ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತವಾಗಿ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಲಾಯಿತು.

nutritious food for students program
ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ (ETV Bharat)

ಸಿಎಂ ಸಿದ್ದರಾಮಯ್ಯ ಮಾತನಾಡಿರುವುದು.. (ETV Bharat)

ಬೆಂಗಳೂರು: ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತವಾಗಿ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದಲ್ಲಿ ಗಣ್ಯರು (ETV Bharat)

ಉಪಹಾರ ಇಲ್ಲದೇ ಶಾಲೆಗೆ ಬಂದು, ಊಟ ಇಲ್ಲದೇ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟನೆ (ETV Bharat)

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು. ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು. ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಠಿಕ ಆಹಾರ ಅಗತ್ಯ ಎಂದು ಹೇಳಿದರು.

ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದಲ್ಲಿ ಗಣ್ಯರು (ETV Bharat)

ಇದನ್ನೂ ಓದಿ:ನಾನು ಜಗ್ಗಲ್ಲ, ಬಗ್ಗಲ್ಲ, ನಿಮ್ಮನ್ನು ಬಗ್ಗು ಬಡಿಯುವೆ : ಸಿಎಂ ಸಿದ್ದರಾಮಯ್ಯ ಶಪಥ - CM Siddaramaiah Statement

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಕಾರ್ಯಕ್ರಮದ ಫೋಟೋಗಳ ಜೊತೆಗೆ ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದ ಕ್ಷಣ (ETV Bharat)

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ ಸ್ಥಳದಲ್ಲೇ ಲಾರಿ ಚಾಲಕನ ಮೊಬೈಲ್ ಲೊಕೇಶನ್ ಪತ್ತೆ: ಮಂದಗತಿಯ ಕಾರ್ಯಾಚರಣೆಗೆ ಕಿಡಿ - Shirur Hill Collapse

ನಾಳೆ ಅಂಕೋಲಾಗೆ ಸಿಎಂ ಭೇಟಿ: ಮಳೆಯಿಂದ ರಸ್ತೆ ಹಾನಿ, ಮನೆ ಕುಸಿತ ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ ತೆರಳುತ್ತಿರುವುದಾಗಿ ತಿಳಿಸಿದರು.

ABOUT THE AUTHOR

...view details