ಕರ್ನಾಟಕ

karnataka

ETV Bharat / state

ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ: ಮುಂಗಡ ಬುಕ್ಕಿಂಗ್​ನಲ್ಲಿ ಶೇ.10ರಷ್ಟು ರಿಯಾಯಿತಿ - NWKRTC Bus Service - NWKRTC BUS SERVICE

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಪ್ಟೆಂಬರ್ 5 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ.

ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ (ETV Bharat)

By ETV Bharat Karnataka Team

Published : Sep 1, 2024, 9:13 PM IST

ಹುಬ್ಬಳ್ಳಿ:ಗೌರಿ-ಗಣೇಶ ಹಬ್ಬದ ಆಚರಣೆಗೆ ಆಗಮಿಸುವವರು ಹಾಗೂ ರಜೆ ಮುಗಿಸಿ ಹಿಂದಿರುಗುವವರು ಸೇರಿ ಮತ್ತಿತರ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಪ್ಟೆಂಬರ್ 5 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು, ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸಪ್ಟೆಂಬರ್ 6ರಂದು ಶುಕ್ರವಾರ ಗೌರಿ ಹಬ್ಬ, 7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸಪ್ಟೆಂಬರ್ 5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್​​ಗಳನ್ನು ನಿಯೋಜಿಸಲಾಗಿದೆ.

ಹಬ್ಬದ ಆಚರಣೆಗಾಗಿ ಆಗಮಿಸುವವರ ಅನುಕೂಲಕ್ಕಾಗಿ ಸೆಪ್ಟೆಂಬರ್ 5 ಮತ್ತು 6 ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.

ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ (ETV Bharat)

ಇದನ್ನೂ ಓದಿ:ಕರಾವಳಿಯಲ್ಲಿ ಎರಡು ದಿನ ಸ್ಟಾರ್ ನಟರ ಪ್ರವಾಸ; ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಜೂ. ಎನ್​ಟಿಆರ್ - Jr NTR offered special pooja

ಅದೇ ರೀತಿ ಹಬ್ಬದ ರಜೆ ಮುಗಿಸಿಕೊಂಡು ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಸೆಪ್ಟೆಂಬರ್ 8ರಂದು ರವಿವಾರ ಹಾಗೂ 9ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ.

ಸೆಪ್ಟೆಂಬರ್ 5 ರಿಂದ 10ರ ವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಗಡ ಬುಕ್ಕಿಂಗ್; ರಿಯಾಯಿತಿ
ಹಬ್ಬದ ವಿಶೇಷ ಬಸ್ಸುಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್​​ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬೆಳಗ್ಗೆ ಇಡ್ಲಿ, ದಿನವಿಡೀ ಪಾನ್​ ವ್ಯಾಪಾರ: ಈಗ ಪರಿಸರಸ್ನೇಹಿ ಗಣೇಶನ ತಯಾರಿಸುತ್ತಿರುವ ಕಾಯಕಯೋಗಿ! - story of a hard worker

ABOUT THE AUTHOR

...view details