ಹುಬ್ಬಳ್ಳಿ:ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಹಾಗೂ ಬಾದಾಮಿಯ ಬನಶಂಕರಿ ದೇವಿ ಜಾತ್ರೆಗಳಿಗೆ ತೆರಳುವ ಭಕ್ತಾದಿಗಳು ಹಾಗೂ ಇತರ ಸಾರ್ವಜನಿಕರ ಅನುಕೂಲಕ್ಕಾಗಿ ಜನವರಿ 11 ರಿಂದ 18ರ ವರೆಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ.
ಬನದ ಹುಣ್ಣಿಮೆ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡ ಹಾಗೂ ಬಾಗಲಕೋಟೆಯ ಬಾದಾಮಿಯ ಬನಶಂಕರಿ ದೇವಿ ಜಾತ್ರೆಗಳು ಜನವರಿ 11ರಿಂದ 18ರವರೆಗೆ ವೈಭವದಿಂದ ಜರುಗಲಿವೆ. ಹುಬ್ಬಳ್ಳಿ - ಧಾರವಾಡ ಅವಳಿ ನಗರ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳಿಂದ ಸಾವಿರಾರು ಭಕ್ತರು ಹೋಗಿ ಬರುತ್ತಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡ ಮತ್ತು ಬನಶಂಕರಿಗೆ ನೇರ ವಿಶೇಷ ಜಾತ್ರಾ ಬಸ್ಗಳು ಸಂಚರಿಸಲಿವೆ.
ಜ.11ರಂದು (ಇಂದು), 12ರಂದು ರವಿವಾರ, 13ರಂದು ಸೋಮವಾರ ರಥೊತ್ಸವ ಹಾಗೂ ಜ.14ರಂದು ಮಂಗಳವಾರ ದೇವಿಯ ವಾರ ಮತ್ತು ಮಕರ ಸಂಕ್ರಾಂತಿ ಸಾರ್ವಜನಿಕ ರಜೆ ಇದೆ. ಈ ಅವಧಿಯಲ್ಲಿ ಹೆಚ್ಚಿನ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.
ಬಸ್ ಹೊರಡುವ ಸ್ಥಳ ಹಾಗೂ ಸಂಚಾರ ಮಾರ್ಗ:ಹುಬ್ಬಳ್ಳಿಯಲ್ಲಿ ಜಾತ್ರೆ ವಿಶೇಷ ಬಸ್ಗಳು ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.